Breaking News
Home / ಅಂತರಾಷ್ಟ್ರೀಯ / ಭಾರತ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ : ಟ್ರಂಪ್ ವಾರ್ನಿಂಗ್

ಭಾರತ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಪ್ರತೀಕಾರ ತೀರಿಸಿಕೊಳ್ಳುತ್ತೇವೆ : ಟ್ರಂಪ್ ವಾರ್ನಿಂಗ್

Spread the love

ವಾಷಿಂಗ್ಟನ್, ಏ.7- ಡೆಡ್ಲಿ ಕೊರೊನಾ ವೈರಾಣು ದಾಳಿಯಿಂದ ಅಪಾರ ಸಾವು ಮತ್ತು ಸೋಂಕಿನಿಂದ ಕಂಗೆಟ್ಟಿರುವ ಅಮೆರಿಕಾ ಕೋವಿಡ್-19 ವೈರಾಣು ಸೋಂಕು ನಿಯಂತ್ರಣದಲ್ಲಿ ಪ್ರಮುಖ ಪಾತ್ರ ವಹಿಸುವ ಮಲೇರಿಯಾ ನಿರೋಧಕ ಔಷಧಿ ಹೈಡ್ರಾಕ್ಸಿಕ್ಲೋರೊಕ್ವಿನ್ ರಫ್ತು ಮಾಡದಿದ್ದರೆ ಭಾರತದ ವಿರುದ್ಧ ಪ್ರತೀಕಾರ ಕ್ರಮ ಕೈಗೊಳ್ಳುವುದಾಗಿ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಎಚ್ಚರಿಕೆ ನೀಡಿದ್ದಾರೆ.

ವಾಷಿಂಗ್ಟನ್‍ನಲ್ಲಿ ನಡೆದ ಕೊರೊನಾ ಟಾಸ್ಕ್‍ಫೋರ್ಸ್ ಸಭೆಯಲ್ಲಿ ಮಾತನಾಡಿ, ಟ್ರಂಪ್ ಭಾರತ ಅಮೆರಿಕಕ್ಕೆ ಔಷಧಿ ರಫ್ತು ಮಾಡುತ್ತದೆ ಎಂಬ ವಿಶ್ವಾಸವಿದೆ. ನಾನು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಮಾತನಾಡಿದ್ದು, ಔಷಧಿ ರಫ್ತು ಮೇಲಿನ ನಿಷೇಧವನ್ನು ತೆರವುಗೊಳಿಸುವಂತೆ ಕೇಳಿದ್ದೇನೆ.

ಅಮೆರಿಕಕ್ಕೆ ಅತೀ ಹೆಚ್ಚಿನ ಪ್ರಮಾಣದಲ್ಲಿ ಔಷಧಿ ರಫ್ತು ಮಾಡುವಂತೆ ಕೋರಿದ್ದೇವೆ. ಪ್ರಧಾನಿ ನರೇಂದ್ರ ಮೋದಿ ಅವರೂ ಕೂಡ ಈ ಬಗ್ಗೆ ಸಕಾರಾತ್ಮಕವಾಗಿ ಮಾತನಾಡಿದ್ದಾರೆ ಎಂದು ತಿಳಿಸಿದರು.ಒಂದು ವೇಳೆ ಭಾರತ ಔಷಧಿ ರಫ್ತು ಮಾಡದಿದ್ದರೂ ನಮಗೆ ಅಚ್ಚರಿಯೇನಿಲ್ಲ. ನಾವು ಇದಕ್ಕೆ ಪರ್ಯಾಯ ಮಾರ್ಗ ಹುಡುಕಿದ್ದೇವೆ. ಅಂತೆಯೇ ಭಾರತಕ್ಕೆ ಈ ಕುರಿತ ತಕ್ಕ ತಿರುಗೇಟು ನೀಡುತ್ತೇವೆ ಎಂದು ಟ್ರಂಪ್ ಪ್ರತೀಕಾರದ ಕ್ರಮದ ಮಾತುಗಳನ್ನಾಡಿದ್ದಾರೆ.

ಇನ್ನು ಭಾರತ ಸರ್ಕಾರ ರಫ್ತು ನಿಷೇಧಿಸಿರುವ ಔಷಧಿಗಾಗಿ ಅಮೆರಿಕ ಸೇರಿದಂತೆ ವಿಶ್ವದ 30ಕ್ಕೂ ಅಧಿಕ ರಾಷ್ಟ್ರಗಳು ಭಾರತವನ್ನು ಆಗ್ರಹಿಸಿವೆ. ಕೊರೊನಾ ವೈರಸ್ ನಿಯಂತ್ರಣದಲ್ಲಿ ಮಲೇರಿಯಾ ನಿರೋಧಕ ಔಷಧ ಹೈಡ್ರಾಕ್ಸಿಕ್ಲೊರೊಕ್ವಿನ್ ಪರಿಣಾಮಕಾರಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದು, ಇದೇ ಕಾರಣಕ್ಕೆ ಮುಂಜಾಗ್ರತಾ ಕ್ರಮವಾಗಿ ಭಾರತ ಸರ್ಕಾರ ಈ ಔಷಧಿಯ ರಫ್ತು ಮಾಡುವುದನ್ನು ನಿಷೇಧಿಸಿತ್ತು.


Spread the love

About Laxminews 24x7

Check Also

ಕಾಂಗ್ರೆಸ್​ ತೊರೆದು ಶಿಂಧೆ ಬಣ ಸೇರ್ಪಡೆಯಾದ ಬಾಲಿವುಡ್​ ನಟ ಗೋವಿಂದ; ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆ

Spread the loveಮುಂಬೈ: ಹಿರಿಯ ಬಾಲಿವುಡ್​ ನಟ, ಮಾಜಿ ಸಂಸದ ಗೋವಿಂದ ಗುರುವಾರ (ಮಾರ್ಚ್​ 28) ಕಾಂಗ್ರೆಸ್​ ತೊರೆದು ಶಿವಸೇನೆ (ಏಕನಾಥ್​ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ