Breaking News

ವಿದ್ಯುತ್ ತಂತಿ ಸ್ಪರ್ಶಿಸಿ ರೈತ ಸಾವು

Spread the love

ತುಮಕೂರು: ವಿದ್ಯುತ್ ತಂತಿ ಸ್ಪರ್ಶಿಸಿರೈತ ಸಾವನ್ನಪ್ಪಿರುವ ಘಟನೆ ಶಿರಾ ತಾಲೂಕಿನ ಗೌಡಗೆರೆ ಹೋಬಳಿಯ ಹೊನ್ನೇನಹಳ್ಳಿ ಗ್ರಾಮದಲ್ಲಿ ನಡೆದಿದೆ.

ರಂಗಶಾಮಣ್ಣ (60) ಮೃತ ದುರ್ದೈವಿ. ರಂಗಶಾಮಣ್ಣ ಎಂದಿನಂತೆ ತಮ್ಮ ಜಮೀನಿನಲ್ಲಿ ಕೃಷಿ ಚಟುವಟಿಕೆ ಕೈಗೊಳ್ಳಲು ತೆರಳುತ್ತಿದ್ದರು. ಈ ವೇಳೆ ವಿದ್ಯುತ್ ತಂತಿ ಕಟ್ ಆಗಿ ನೆಲಕ್ಕೆ ಬಿದ್ದಿತ್ತು. ಇದನ್ನು ಗಮನಿಸದೆ ವಿದ್ಯುತ್ ತಂತಿ ಸ್ಪರ್ಶಿಸಿದ ಪರಿಣಾಮ ರೈತ ರಂಗಶಾಮಣ್ಣ ವಿದ್ಯುತ್ ಪ್ರವಹಿಸಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಬೆಸ್ಕಾಂ ಅಧಿಕಾರಿಗಳ ನಿರ್ಲಕ್ಷವೇ ಘಟನೆಗೆ ಕಾರಣ ಎಂದು ಆರೋಪಿಸಲಾಗಿದೆ. ವಿದ್ಯುತ್ ತಂತಿಗಳ ನಿರ್ವಹಣೆ ಹಾಗೂ ಸುರಕ್ಷತೆ ಕುರಿತು ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಗ್ರಾಮಸ್ಥರು ಒತ್ತಾಯಿಸಿದ್ದಾರೆ. ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದರ್ಥ: ಶಿವಲಿಂಗೇಗೌಡ ಸ್ಪಷ್ಟನೆ

Spread the loveಹಾಸನ: ಗೌರವಯುತವಾಗಿ ನಡೆದುಕೊಳ್ಳಬೇಕು ಎಂದರೆ ಘರ್ಷಣೆ ಬೇಡ ಎಂದು ಅರ್ಥ ಎಂದು ಜಿಲ್ಲಾ ಉಸ್ತುವಾರಿ ಸಚಿವ ಕೆ.ಎಂ.ಶಿವಲಿಂಗೇಗೌಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ