Breaking News

ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವಜನವರಿ 19ರ ಬೆಳಗ್ಗೆ

Spread the love

ತುಮಕೂರು: ಲಿಂಗೈಕ್ಯ ಸಿದ್ದಗಂಗಾ ಶಿವಕುಮಾರ ಶ್ರೀಗಳ ಪ್ರಥಮ ಪುಣ್ಯ ಸಂಸ್ಮರಣೋತ್ಸವವನ್ನು ಜನವರಿ 19ರಂದು ಆಚರಿಸಲು ಸಿದ್ದಗಂಗಾ ಮಠದ ಆಡಳಿತ ಮಂಡಳಿ ನಿರ್ಧರಿಸಿದೆ.
ಈ ಕುರಿತು ಇಂದು ಮಠದಲ್ಲಿ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಆಡಳಿತಾಧಿಕಾರಿ ವಿಶ್ವನಾಥಯ್ಯ, ಜನವರಿ 19ರ ಬೆಳಗ್ಗೆ ಹಲವು ಪೂಜಾ ವಿಧಿವಿಧಾನಗಳು ನಡೆಯಲಿದೆ. 10.30ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಮುಖ್ಯಮಂತ್ರಿ ಯಡಿಯೂರಪ್ಪ ಸೇರಿದಂತೆ ಹಲವು ಗಣ್ಯರು, ಸಾಧು-ಸಂತರು ಭಾಗಿಯಾಗಲಿದ್ದಾರೆ ಎಂದು ತಿಳಿಸಿದ್ದಾರೆ.

ದೆಹಲಿ ಮೂಲದ ಕೈಗಾರಿಕೋದ್ಯಮಿ ಮುಖೇಶ್ ಗರ್ಗ್ ಅವರು ಶಿವಕುಮಾರ ಶ್ರೀಗಳ ಬೆಳ್ಳಿ ಪುತ್ಥಳಿಯನ್ನು ತಯಾರು ಮಾಡಿದ್ದಾರೆ. ಪುಣ್ಯ ಸ್ಮರಣೆ ದಿನದಂದು ಗದ್ದುಗೆ ಮೇಲೆ ಪ್ರತಿಷ್ಠಾಪನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.


ಈ ಕಾರ್ಯಕ್ರಮದಲ್ಲಿ ಸುಮಾರು 1 ಲಕ್ಷಕ್ಕೂ ಹೆಚ್ಚು ಭಕ್ತಾದಿಗಳು ಭಾಗವಹಿಸುವ ನಿರೀಕ್ಷೆಯಿದ್ದು ಸಕಲ ಸಿದ್ಧತೆ ನಡೆಯುತ್ತಿದೆ ಎಂದು ಆಡಳಿತಾಧಿಕಾರಿ ವಿಶ್ವನಾಥಯ್ಯ ತಿಳಿಸಿದರು.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ