Breaking News

ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವು

Spread the love

ರಾಯಚೂರು: ನಗರದ ಜಹಿರಾಬಾದ್‌ನ ಎಂ.ಈರಣ್ಣ ವೃತ್ತದಲ್ಲಿ ಗಣೇಶ ವಿಸರ್ಜನೆ ಮೆರವಣಿಗೆ  ವೇಳೆ ಟ್ರ್ಯಾಕ್ಟರ್ ಹರಿದು ಇಬ್ಬರು ಬಾಲಕರು ಸಾವನ್ನಪ್ಪಿದ್ದು ಓರ್ವ ವ್ಯಕ್ತಿಯ ಸ್ಥಿತಿ ಗಂಭೀರವಾಗಿದೆ.

14 ವರ್ಷದ ಸುಚಿತ್, 16 ವರ್ಷದ ಚರಣಕುಮಾರ್ ಮೃತ ದುರ್ದೈವಿಗಳು. 36 ವರ್ಷದ ವಿಜಯಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಖಾಸಗಿ ಆಸ್ಪತ್ರೆಗೆ  ದಾಖಲಿಸಲಾಗಿದೆ.

ಟ್ರ್ಯಾಕ್ಟರ್ ಚಾಲಕ ಬ್ರೇಕ್ ಬದಲು ಆಕ್ಸಿಲರೇಟರ್‌ ಒತ್ತಿದ ಹಿನ್ನೆಲೆ ದುರಂತ ನಡೆದಿದೆ. ಜಹಿರಾಬಾದ್ ನಿಂದ ನಗರದ ಖಾಸಬಾವಿಗೆ ಗಣೇಶ ವಿಸರ್ಜನೆ ಮೆರವಣಿಗೆ ಹೊರಟಿದ್ದ ವೇಳೆ ಘಟನೆ ನಡೆದಿದೆ.

ಇಬ್ಬರು ಬಾಲಕರು ಸಾವನ್ನಪ್ಪಿದ್ರೆ, ಓರ್ವನ ಸ್ಥಿತಿ ಗಂಭೀರವಾಗಿದೆ ನಾಲ್ವರಿಗೆ ಸಣ್ಣಪುಟ್ಟ ಗಾಯಗಳಾಗಿವೆ. ರಾಯಚೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ: ಹೆಚ್‌ಡಿಕೆ

Spread the loveಬೆಂಗಳೂರು: ಈ ಸರ್ಕಾರ ಎಲ್ಲೋ ಜೋಗಪ್ಪ ನಿನ್ನ ಅರಮನೆ ಹಾಡಿನ ಹಾಗೆ ಆಗಿದೆ ಎಂದು ರಾಜ್ಯ ಸರ್ಕಾರದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ