Breaking News

ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ಸಾವು

Spread the love

ಬೆಂಗಳೂರು: ಕೊತ್ತನೂರು ಬಳಿಯ ನಾರಾಯಣಪುರ ಎಂಬಲ್ಲಿ ಶೆಡ್‌ಗೆ ಬೆಂಕಿ ಬಿದ್ದು ಇಬ್ಬರು ಮಕ್ಕಳು ದಾರುಣ ಸಾವನ್ನಪ್ಪಿರುವ ಘಟನೆ ನಡೆದಿದೆ.

ಅರ್ಜುನ್ (5), ಆಶಾ (3) ಮೃತ ಮಕ್ಕಳು. ಇಂದು ಮಧ್ಯಾಹ್ನ 1:30 ರ ಸುಮಾರಿಗೆ ಘಟನೆ ನಡೆದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಮಕ್ಕಳು ಮೂಲತಃ ರಾಯಚೂರು ಮೂಲದವರು. ಇವರ ತಂದೆ-ತಾಯಿ ಕೂಲಿ ಕೆಲಸಕ್ಕೆ ಬೆಂಗಳೂರಿಗೆ ಬಂದಿದ್ದರು. ಅಜ್ಜಿ ಶೆಡ್‌ನಿಂದ ಹೊರಗಡೆ ಹೋಗಿದ್ದಾಗ ಬೆಂಕಿ ಕಾಣಿಸಿಕೊಂಡಿದೆ. ಮಕ್ಕಳು ಶೆಡ್‌ನಲ್ಲೇ ಸಿಲುಕಿಕೊಂಡು ಸಾವನ್ನಪ್ಪಿದ್ದಾರೆ.

ಒಂದು ಮಗು ಸ್ಥಳದಲ್ಲೇ ಸಾವು ಕಂಡರೆ, ಇನ್ನೊಂದು ಮಗು ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗದಲ್ಲಿ ಕೊನೆಯುಸಿರೆಳೆದಿದೆ. ಸ್ಥಳಕ್ಕೆ ಕೊತ್ತನೂರು ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ