Breaking News

ಕೃಷಿ ಹೊಂಡದಲ್ಲಿ ಮುಳುಗಿ ಇಬ್ಬರು ಮಕ್ಕಳು ದುರ್ಮರಣ

Spread the love

ಚಿಕ್ಕಬಳ್ಳಾಪುರ: ಕೃಷಿ ಹೊಂಡಕ್ಕೆ ಆಕಸ್ಮಿಕವಾಗಿ ಬಿದ್ದು ಇಬ್ಬರು ಮಕ್ಕಳು ಸಾವನ್ನಪ್ಪಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ  ತೊಗರಿ ಘಟ್ಟ ಗ್ರಾಮದಲ್ಲಿ ನಡೆದಿದೆ.

ಸವಿತಾ – ಮುನಿರಾಜು ದಂಪತಿಯ ಮಗಳು ದಕ್ಷ (11) ಹಾಗೂ ಆಶಾ- ಪ್ರದೀಪ್ ದಂಪತಿಯ ಮಗ ಧನುಷ್ (4) ಮೃತ ಮಕ್ಕಳು. ಇಬ್ಬರು ಕೃಷಿ ಹೊಂಡದ ಬಳಿ ಆಟವಾಡಲು ತೆರಳಿದ್ದರು. ಈ ವೇಳೆ ಇಬ್ಬರು ಮಕ್ಕಳು ಆಕಸ್ಮಿಕವಾಗಿ ಕೃಷಿ ಹೊಂಡಕ್ಕೆ ಬಿದ್ದು ಸಾವನ್ನಪ್ಪಿದ್ದಾರೆ.

ಕೃಷಿ ಹೊಂಡಕ್ಕೆ ಸೂಕ್ತ ಬೇಲಿ ನಿರ್ಮಿಸದ ಕಾರಣ ಮಾಲೀಕ ಗುರುಮೂರ್ತಿ ವಿರುದ್ಧ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ. ಈ ಸಂಬಂಧ ತನಿಖೆ ನಡೆಯುತ್ತಿದೆ.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ