Breaking News

ನಾಳೆಯಿಂದ 2 ದಿನ ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ – ಮಲ್ಲಿಕಾರ್ಜುನ ಖರ್ಗೆಯಿಂದ ಉದ್ಘಾಟನೆ

Spread the love

ಚಾಮರಾಜನಗರ: ಅಕ್ಟೋಬರ್ 24 ಹಾಗೂ ಅ.25 ರಂದು ಚಾಮರಾಜನಗರದಲ್ಲಿ  ಅಂತಾರಾಷ್ಟ್ರೀಯ ಬೌದ್ಧ ಮಹಾ ಸಮ್ಮೇಳನ ನಡೆಯಲಿದೆ.

ಬೃಹತ್‌ ಸಮ್ಮೇಳನಕ್ಕಾಗಿ  ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಕ್ರೀಡಾಂಗಣದಲ್ಲಿ ಭರದ ಸಿದ್ಧತೆ ನಡೆದಿದೆ. ಶ್ರೀಲಂಕಾ, ವಿಯೆಟ್ನಾಂ, ಜಪಾನ್, ಮಲೇಶಿಯಾ ಮೊದಲಾದ ದೇಶಗಳ ಸಾವಿರಾರು ಬೌದ್ಧ ಬಿಕ್ಕುಗಳು ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ.

ರಾಜ್ಯದ ವಿವಿಧೆಡೆಯಿಂದ ಎರಡು ದಿನಗಳು ಒಟ್ಟಾರೆ ಎರಡು ಲಕ್ಷಕ್ಕೂ ಹೆಚ್ಚು ಮಂದಿ ಭಾಗವಹಿಸುವ ನಿರೀಕ್ಷೆ ಇದೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರಿಂದ ಉದ್ಘಾಟನೆ ನೇರವೆರಲಿದೆ.

ಸಿಎಂ, ಡಿಸಿಎಂ ಮೊದಲಾದವರು ಭಾಗವಹಿಸಲಿದ್ದಾರೆ. ಕರುಣೆ, ಪ್ರೀತಿ,‌ ಮಮತೆ, ತ್ಯಾಗದ ಪ್ರತೀಕವಾಗಿರುವ ಬುದ್ಧ ಹಾಗೂ ಬುದ್ಧನ ತತ್ವಾದರ್ಶಗಳನ್ನ ಪರಿಣಾಮಕಾರಿಯಾಗಿ ಜನರಿಗೆ ಮುಟ್ಟಿಸಲು ನಿರ್ಧರಿಸಲಾಗಿದೆ. ಬೌದ್ಧ ಧರ್ಮದ ಪ್ರಾಮುಖ್ಯತೆ ಸಾರಲು ಸಮಾವೇಶ ನಡೆಸಲಾಗುತ್ತಿದೆ.

ಚಿಂತನ ಮಂಥನ, ಸಂವಾದ, ವಿಚಾರ ಸಂಕಿರಣಗಳ ಆಯೋಜ‌ನೆ ಮಾಡಲಾಗಿದೆ. ಕಳೆದ ವರ್ಷ ಮೈಸೂರಿನಲ್ಲಿ ನಡೆದಿತ್ತು. ಈ ಬಾರಿ ಚಾ.ನಗರದಲ್ಲಿ ಆಯೋಜಿಸಲಾಗಿದ್ದು, ಇದೇ ರೀತಿ ಪ್ರತಿ ವರ್ಷ ಒಂದೊಂದು ಜಿಲ್ಲೆಯಂತೆ ರಾಜ್ಯದ 31 ಜಿಲ್ಲೆಗಳಲ್ಲೂ ನಡೆಸಲು ತೀರ್ಮಾನಿಸಲಾಗಿದೆ.


Spread the love

About Laxminews 24x7

Check Also

ಜಂಬೂ ಸವಾರಿಗೆ ಪುಷ್ಪಾರ್ಚನೆ – ಪ್ರೋಟೋಕಾಲ್‌ನಲ್ಲಿ ಸಿಎಂ ಪತ್ನಿ ಹೆಸರು ಇರಲಿಲ್ಲ: ಸಚಿವ ಯತೀಂದ್ರ

Spread the loveಮೈಸೂರು: ಮುಖ್ಯಮಂತ್ರಿಯಾಗಿ ಡಿಕೆ ಶಿವಕುಮಾರ್  ಅವರು ಮೊದಲ ಬಾರಿಗೆ ಜಂಜೂಸವಾರಿಗೆ ಪುಷ್ಪಾರ್ಚನೆ ಮಾಡಿದ್ದು, ದಸರಾ  ಕೂಡ ಯಶಸ್ವಿಯಾಗಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ