Breaking News

ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ಸಾವು

Spread the love

ಮಂಗಳೂರು: ನದಿಯಲ್ಲಿ ಸ್ನಾನಕ್ಕೆ ತೆರಳಿದ್ದ ನಾಲ್ವರಲ್ಲಿ ಇಬ್ಬರು ವಿದ್ಯಾರ್ಥಿನಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿರುವ ಘಟನೆ ಮಂಗಳೂರಲ್ಲಿ ನಡೆದಿದೆ.

ಕಡಬದ ಕುಟ್ರುಪ್ಪಾಡಿ ಗ್ರಾಮದ ಕೊಲ್ಯದಕಟ್ಟ ಎಂಬಲ್ಲಿ ಗುಂಡ್ಯಹೊಳೆಯಲ್ಲಿ ಘಟನೆ ನಡೆದಿದೆ. ಕುಟ್ರುಪ್ಪಾಡಿ ನಿವಾಸಿಗಳಾದ ಸುನೀತಾ (21), ಅರ್ಪಿತಾ (15) ವಿದ್ಯಾರ್ಥಿನಿಯರು ಮೃತಪಟ್ಟಿದ್ದಾರೆ.

ಒಂದೇ ಕುಟುಂಬದ ಇಬ್ಬರು ಯುವತಿಯರು ನೀರಲ್ಲಿ ಮುಳುಗಿ ದಾರುಣ ಸಾವನ್ನಪ್ಪಿದ್ದಾರೆ. ಸ್ಥಳೀಯರು ಇವರಿಬ್ಬರ ಮೃತದೇಹ ಹೊರ ತೆಗೆದರು. ಕಡಬ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ವಿಧಾನ ಪರಿಷತ್‌ ಸಭಾಪತಿಯಾಗಿ ಸಲೀಂ ಅಹಮದ್ ಆಯ್ಕೆ

Spread the love ಬೆಂಗಳೂರು: ಬಸವರಾಜ ಹೊರಟ್ಟಿ ಅವರ ರಾಜೀನಾಮೆಯಿಂದ ತೆರವಾಗಿದ್ದ ವಿಧಾನ ಪರಿಷತ್‌ ಸಭಾಪತಿ ಸ್ಥಾನಕ್ಕೆ ಇಂದು ಸಲೀಂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ