Breaking News

ಆಟವಾಡುತ್ತಾ ಬಾವಿಗೆ ಬಿದ್ದ ಎರಡು ವರ್ಷದ ಮಗು – ಅದೃಷ್ಟವಶಾತ್‌ ಪಾರು

Spread the love

ಕಾರವಾರ: ಆಟವಾಡುತ್ತಾ ಆಕಸ್ಮಿಕವಾಗಿ ಬಾವಿಗೆ ಬಿದ್ದು ಸಾವು-ಬದುಕಿನ ನಡುವೆ ಹೋರಾಡುತ್ತಿದ್ದ ಎರಡು ವರ್ಷದ ಬಾಲಕಿಯನ್ನು ವ್ಯಕ್ತಿಯೋರ್ವ ರಕ್ಷಿಸಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿನಗರದ ಕಸ್ತೂರಬಾ ನಗರದಲ್ಲಿ ನಡೆದಿದೆ.

ಇಲ್ಲಿನ ನಿವಾಸಿ ಭುವಿ (2) ಬಾವಿಗೆ ಬಿದ್ದು ಅದೃಷ್ಟವಶಾತ್ ಬದುಕುಳಿದ ಬಾಲಕಿಯಾಗಿದ್ದಾಳೆ. ಮನೆಯಲ್ಲಿ ಮಗು ಕಾಣದಿದ್ದಾಗ ಆತಂಕಗೊಂಡ ಅಜ್ಜಿ ಸುತ್ತಮುತ್ತ ಹುಡುಕಾಡಿದ್ದಾರೆ. ಬಾವಿಯ ಹತ್ತಿರ ಹೋದಾಗ ಮಗುವಿನ ಅಳುವಿನ ಶಬ್ದ ಕೇಳಿಬಂದಿದೆ. ಆತಂಕದೊಂದಿಗೆ ಬಾವಿಯೊಳಗೆ ಇಣುಕಿ ನೋಡಿದಾಗ, ಮಗು ನೀರಿಗೆ ಇಳಿಸಲಾಗಿದ್ದ ಪಂಪ್ ಪೈಪ್‌ನ್ನು ಗಟ್ಟಿಯಾಗಿ ಹಿಡಿದುಕೊಂಡು ಅಳುತ್ತಿರುವುದು ಕಂಡುಬಂದಿದೆ.

ಈ ಸುದ್ದಿ ತಿಳಿಯುತ್ತಿದ್ದಂತೆಯೇ ಹತ್ತಿರದಲ್ಲೇ ವಾಸವಿರುವ ಪಯಾಜ್‌ ಚೌಟಿ ಎಂಬವರು ತಕ್ಷಣ ಸ್ಥಳಕ್ಕೆ ಧಾವಿಸಿ ಬಾವಿಗೆ ಹಗ್ಗದ ಸಹಾಯದಿಂದ ಇಳಿದು ರಕ್ಷಣೆ ಮಾಡಿದ್ದಾರೆ.


Spread the love

About Laxminews 24x7

Check Also

ಅರಣ್ಯಾಧಿಕಾರಿಗಳ ದಾಳಿ – ಫ್ರಿಡ್ಜ್‌ಲ್ಲಿ 21 ಕೆಜಿ ಜಿಂಕೆ ಮಾಂಸ ಪತ್ತೆ

Spread the loveಕಾರವಾರ: ಕಾಡು ಪ್ರಾಣಿಗಳ ಹತ್ಯೆ ಶಂಕೆಯ ಮೇರೆಗೆ ಅರಣ್ಯ ಇಲಾಖೆ (Forest Department) ಅಧಿಕಾರಿಗಳು ಭಟ್ಕಳ (Bhatkal) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ