Breaking News

ಭದ್ರಾ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ಸಾವು – ಮೃತದೇಹ ಪತ್ತೆ

Spread the love

ಚಿಕ್ಕಮಗಳೂರು: ಶನಿವಾರ ಚಿಕ್ಕಮಗಳೂರು  ಜಿಲ್ಲೆಯ ಕಳಸ ತಾಲೂಕಿನ ಭದ್ರಾ ನದಿಯಲ್ಲಿ ಈಜಲು ಹೋಗಿ ಸಾವನ್ನಪ್ಪಿದ್ದ ಇಬ್ಬರು ಯುವಕರ ಮೃತದೇಹ ಇಂದು ಪತ್ತೆಯಾಗಿದೆ.

ಮೂಲತಃ ಕೊಡಗು ಜಿಲ್ಲೆಯ ಅಭಿಷೇಕ್ (27) ಹಾಗೂ ಯೋಗೀಶ್ (17) ಕಳಸದಲ್ಲಿ ಸಂಬಂಧಿಕರ ಮನೆಗೆ ಬಂದಿದ್ದರು. ಈ ವೇಳೆ ಕಳಸ ತಾಲೂಕಿನ ಬಾಳೆಹೊಳೆ ಬಳಿ ಭದ್ರಾ ನದಿಯಲ್ಲಿ ಈಜಲು ಹೋಗಿ ಭದ್ರಾ ನದಿಯ ಆಳದ ಪರಿಚಯವಿಲ್ಲದ ಕಾರಣ ಇಬ್ಬರೂ ಸಾವನ್ನಪ್ಪಿದ್ದರು. ಪೊಲೀಸರು ಸಂಜೆವರೆಗೂ ಮೃತ ದೇಹ ಹುಡುಕಿ ಕತ್ತಲಾದ ಮೇಲೆ ಶೋಧ ಕಾರ್ಯ ನಿಲ್ಲಿಸಿದ್ದರು. ಇಂದು ಮತ್ತೆ ಪೊಲೀಸ್ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯ ಇದು ತಜ್ಞರು ಶೋಧ ಕಾರ್ಯ ನಡೆಸಿದಾಗ ಇಬ್ಬರ ಮೃತದೇಹಗಳು ಪತ್ತೆಯಾಗಿವೆ.

ಘಟನೆ ಸಂಬಂಧ ಕಳಸ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಮೃತ ಅಭಿಷೇಕ್ ಅಕ್ಕ ಕಳಸಾದ ಕಾಫಿ ತೋಟದಲ್ಲಿ ಕೆಲಸ ಮಾಡುತ್ತಿದ್ದರು. ಇಬ್ಬರು ಯುವಕರು ಕಳಸಕ್ಕೆ ಬಂದಾಗ ಈ ದುರ್ಘಟನೆ ಸಂಭವಿಸಿದೆ. ಮೃತ ದೇಹ ಪತ್ತೆಯಾಗುತ್ತಿದ್ದಂತೆ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿತ್ತು.


Spread the love

About Laxminews 24x7

Check Also

ರಾಜ್ಯದಲ್ಲಿ ಬರ – 177 ತಾಲೂಕುಗಳಲ್ಲಿ 46,324 ಕೋಟಿ ಬೆಳೆ ನಷ್ಟ , 7,142 ಕೋಟಿ ನೆರವಿಗೆ ಮನವಿ

Spread the loveಬೆಂಗಳೂರು: ರಾಜ್ಯದ 240 ತಾಲೂಕುಗಳ ಪೈಕಿ 217 ತಾಲೂಕುಗಳನ್ನ ಬರಪೀಡಿತ  ಎಂದು ಘೋಷಿಸಲಾಗಿದ್ದು, ಬರ ಪರಿಸ್ಥಿತಿ ಹಿನ್ನೆಲೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ