Breaking News

ಸುವರ್ಣ ನದಿಯಲ್ಲಿ ಈಜಲು ತೆರಳಿದ್ದ ಇಬ್ಬರು ಯುವಕರು ನೀರುಪಾಲು

Spread the love

ಉಡುಪಿ: ಸ್ನೇಹಿತರೊಂದಿಗೆ ಈಜಲು ತೆರಳಿದ್ದ ಇಬ್ಬರು ಯುವಕರು ಸುವರ್ಣ ನದಿಯಲ್ಲಿ  ಮುಳುಗಿ ಮೃತಪಟ್ಟ ಘಟನೆ ಕಾರ್ಕಳ ತಾಲೂಕಿನ ಹಿರ್ಗಾನ ಗ್ರಾಮದ ಹೆರ್ಮುಂಡೆಯಲ್ಲಿ ನಡೆದಿದೆ.

ಮೃತರನ್ನು ಭರತ್ ಪೂಜಾರಿ (29) ಹಾಗೂ ಹರ್ಷನ್ ಆಚಾರ್ಯ (23) ಎಂದು ಗುರುತಿಸಲಾಗಿದೆ. ಕೆಲಸಕ್ಕೆ ರಜೆ ಇದ್ದ ಹಿನ್ನೆಲೆ ಐವರು ಸ್ನೇಹಿತರು ಮಂಗಿಲಾರು ಮೂಲಕ ಸುಮಾರು ಎರಡು ಕಿ.ಮೀ. ದುರ್ಗಮ ದಾರಿ ಕ್ರಮಿಸಿ ನದಿಗೆ ತೆರಳಿದ್ದರು. ಈ ವೇಳೆ ಆಳವಾದ ನೀರಿಗೆ ತೆರಳಿದ ಭರತ್ ಹಾಗೂ ಹರ್ಷನ್ ಮುಳುಗಿದ್ದಾರೆ.

ವಾಹನ ಸಂಚಾರಕ್ಕೆ ದಾರಿ ಇಲ್ಲದ ಕಾರಣ ಅಗ್ನಿಶಾಮಕ ದಳದ ಸಿಬ್ಬಂದಿ ಸುಮಾರು ಮೂರು ಕಿ.ಮೀ. ನಡೆದು ಘಟನಾ ಸ್ಥಳಕ್ಕೆ ತೆರಳಿ, ಸ್ಥಳೀಯರ ಸಹಕಾರದೊಂದಿಗೆ ಮೂರು ಗಂಟೆಗೂ ಅಧಿಕ ಕಾಲ ಕಾರ್ಯಾಚರಣೆ ನಡೆಸಿ ಮೃತದೇಹಗಳನ್ನು ಮೇಲಕ್ಕೆತ್ತಿದರು. ಠಾಣಾಧಿಕಾರಿ ಸಂಜೀವ ದೇವಾಡಿಗ ನೇತೃತ್ವದಲ್ಲಿ ಕಾರ್ಯಾಚರಣೆ ನಡೆಯಿತು.

ಭರತ್ ಪೇಂಟಿಂಗ್ ಕೆಲಸ ಮಾಡಿಕೊಂಡು ಕುಟುಂಬ ನಿರ್ವಹಿಸುತ್ತಿದ್ದು, ಸ್ವಂತ ಮನೆ ನಿರ್ಮಾಣದ ಕನಸು ಕಂಡಿದ್ದರು. ಮನೆಯ ಕಾಮಗಾರಿ ಸ್ಲಾಬ್ ಹಂತ ತಲುಪಿದ್ದು, ಶೀಘ್ರವೇ ಗೃಹ ಪ್ರವೇಶ ಮಾಡುವ ನಿರೀಕ್ಷೆಯಲ್ಲಿದ್ದರು. ಆದರೆ ವಿಧಿಯ ಕ್ರೂರ ಆಟಕ್ಕೆ ಯುವಕ ಬಲಿಯಾಗಿರುವುದು ಕುಟುಂಬಸ್ಥರಲ್ಲಿ ತೀವ್ರ ದುಃಖಕ್ಕೆ ಕಾರಣವಾಗಿದೆ.


Spread the love

About Laxminews 24x7

Check Also

ಸಿಎಂ ಆಗಿದ್ದಾಗಲೇ ನೈಸ್‌ ರದ್ದು ಮಾಡಿದ್ದರೆ ಸಮಸ್ಯೆಯೇ ಇರುತ್ತಿರಲಿಲ್ಲ: ಹೆಚ್‌ಡಿಕೆಗೆ ಕೃಷ್ಣ ಬೈರೇಗೌಡ ತಿರುಗೇಟು

Spread the loveಬೆಂಗಳೂರು: ಹೆಚ್‌ಡಿ ಕುಮಾರಸ್ವಾಮಿ ಅವರೇ ಈ ಹಿಂದೆ ಮುಖ್ಯಮಂತ್ರಿಯಾಗಿದ್ದರು. ಪೆನ್ನು-ಪೇಪರ್ ಕೈಯಲ್ಲಿದ್ದಾಗಲೇ ನೈಸ್‌ ಯೋಜನೆಯನ್ನು  ರದ್ದು ಮಾಡಿದ್ದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ