Home / ಜಿಲ್ಲೆ / ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ

ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ

Spread the love

ಬೆಂಗಳೂರು: ಯುಬಿ ಸಿಟಿ ಗಲಾಟೆ ಪ್ರಕರಣದಲ್ಲಿ ಜೈಲುವಾಸ ಅನುಭವಿಸಿ ಬಂದ ಶಾಸಕ ಎನ್.ಎ.ಹ್ಯಾರಿಸ್ ಪುತ್ರ ಮೊಹಮ್ಮದ್ ನಲಪಾಡ್ ಮತ್ತೊಮ್ಮೆ ಸುದ್ದಿಯಾಗಿದ್ದಾನೆ. ಕಾರ್ ಅಪಘಾತ ಪ್ರಕರಣದಲ್ಲಿ ಸಿಲುಕಿಕೊಂಡಿದ್ದಾರೆ.

ಭಾನುವಾರ ನಗರದ ಮೇಖ್ರಿ ಸರ್ಕಲ್ ಬಳಿ ಐಷಾರಾಮಿ ಬೆಂಟ್ಲಿ ಕಾರು ಅಪಘಾತ ಮಾಡಿದ್ದು ಮಹಮ್ಮದ್ ನಲಪಾಡ್ ಎಂಬ ವಿಚಾರ ಈಗ ಬೆಳಕಿಗೆ ಬಂದಿದೆ. ಮೂರು ವಾಹನಗಳಿಗೆ ಡಿಕ್ಕಿ ಹೊಡೆದ ಬೆಂಟ್ಲಿ ಕಾರನ್ನು ಅಂದು ನಲಪಾಡ್ ಅವರೇ ಚಲಾಯಿಸುತ್ತಿದ್ದುದು ಪೊಲೀಸ್ ವಿಚಾರಣೆಯಿಂದ ತಿಳಿದುಬಂದಿದ್ದು, ನಲಪಾಡ್ ಗೆ ಪೊಲೀಸ್ ಇಲಾಖೆ ನೋಟಿಸ್ ನೀಡಿದೆ.

ಮೇಖ್ರಿ ಸರ್ಕಲ್ನಲ್ಲಿ ಅಪಘಾತ ಮಾಡಿದ ಬೆಂಟ್ಲಿ ಕಾರನ್ನು ನಲಪಾಡ್ ಅವರೇ ಚಲಾಯಿಸುತ್ತಿದ್ದುದು ಟೆಕ್ನಿಕಲ್ ಹಾಗೂ ಪ್ರತ್ಯಕ್ಷದರ್ಶಿಗಳ ಸಹಾಯದಿಂದ ತಿಳಿದುಬಂದಿದೆ. ಅಜಾಗರೂಕ ಚಾಲನೆಯಿಂದಾಗಿ ಈ ಅಪಘಾತವಾಗಿದ್ದು, ಮೊಹಮ್ಮದ್ ನಲಪಾಡ್ ಅವರಿಗೆ ವಿಚಾರಣೆ ಹಾಜರಾಗಲು ನೋಟೀಸ್ ನೀಡಿದ್ದೇವೆ.

ವಿಚಾರಣೆಗೆ ಹಾಜರಾದ ನಂತರ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದು ಸಂಚಾರ ವಿಭಾಗ ಜಂಟಿ ಆಯುಕ್ತ ರವಿಕಾಂತೇ ಗೌಡ ಹೇಳಿಕೆ ನೀಡಿದ್ದಾರೆ.

ಮೊನ್ನೆ ಭಾನುವಾರ ಮೇಖ್ರಿ ಸರ್ಕಲ್ನ ಅಂಡರ್ಪಾಸ್ನಲ್ಲಿ ಸಂಭವಿಸಿದ್ದ ಅಪಘಾತದಲ್ಲಿ ಐಷಾರಾಮಿ ಬೆಂಟ್ಲಿ ಕಾರು ಮೂರು ವಾಹನಗಳಿಗೆ ಗುದ್ದಿತ್ತು. ಬೈಕ್ ಸವಾರನೊಬ್ಬನಿಗೆ ಗಂಭೀರ ಗಾಯವಾಗಿತ್ತು. ಆಟೋವೊಂದು ಜಖಂಗೊಂಡಿತ್ತು. ಆದರೆ, ಅಪಘಾತವಾದ ಕೂಡಲೇ ಆತ ಬೇರೊಂದು ಕಾರಿನಲ್ಲಿ ಕೂತು ತಪ್ಪಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದರು.

ನಿನ್ನೆ ಗನ್ ಮ್ಯಾನ್ ಒಬ್ಬರು ತಾನೇ ಆ ಕಾರು ಚಲಾಯಿಸುತ್ತಿದ್ದಾಗಿ ಹೇಳಿಕೊಂಡು ಪೊಲೀಸರಲ್ಲಿ ಶರಣಾಗಲು ಬಂದಿದ್ದರಂತೆ. ಆದರೆ, ವಿಚಾರಣೆ ನಡೆಸಿದಾಗ ಆ ವ್ಯಕ್ತಿ ಕಾರು ಚಾಲನೆ ಮಾಡಿದ್ದಲ್ಲ ಎಂಬುದು ಪೊಲೀಸರಿಗೆ ಗೊತ್ತಾಗಿದೆ.

ಈಗ ಪ್ರತ್ಯಕ್ಷದರ್ಶಿಗಳ ಹೇಳಿಕೆ ಹಾಗೂ ತಾಂತ್ರಿಕ ಮಾಹಿತಿಯನ್ನಾಧರಿಸಿ ಆ ಕಾರು ಚಲಾಯಿಸುತ್ತಿದ್ದುದು ಮೊಹಮ್ಮದ್ ನಲಪಾಡ್ ನೇ ಎಂಬುದು ದೃಢಪಟ್ಟಿದೆ ಎಂದು ಪೊಲೀಸರ ವಾದವಾಗಿದೆ.

2018ರಲ್ಲಿ ಯುಬಿ ಸಿಟಿಯಲ್ಲಿ ವಿದ್ವತ್ ಮೇಲಿನ ಹಲ್ಲೆ ಪ್ರಕರಣದಲ್ಲಿ ಮೊಹಮ್ಮದ್ ನಲಪಾಡ್ 118 ದಿನಗಳ ಕಾಲ ಜೈಲಿನಲ್ಲಿದ್ದನು. ಈಗ ಜಾಮೀನನ ಮೇಲೆ ಹೊರಗೆ ಬಂದಿದ್ದಾನೆ. ತಂದೆಯ ರಾಜಕೀಯ ಚಟುವಟಿಕೆಗಳಲ್ಲೂ ಅವರು ತೊಡಗಿಸಿಕೊಂಡಿದ್ದಾರೆ. ಇಂಥ ಸಂದರ್ಭದಲ್ಲಿ ನಲಪಾಡ್ ಮತ್ತೊಮ್ಮೆ ವಿವಾದಕ್ಕೆ ಸಿಲುಕಿಕೊಂಡಿರುವುದು ಗಮನಾರ್ಹವಾಗಿದೆ.


Spread the love

About Laxminews 24x7

Check Also

ಬುಧವಾರದಂದು ಪ್ರಧಾನಿಗಳು ಆಗಮಿಸುವ ಸ್ಥಳವನ್ನು ಪರಿಶೀಲಿಸಿದ : ಬಾಲಚಂದ್ರ & ರಮೇಶ್ ಜಾರಕಿಹೊಳಿ

Spread the loveಬೆಳಗಾವಿ- ಪ್ರಧಾನಿ ನರೇಂದ್ರ ಮೋದಿಯವರು ಬೆಳಗಾವಿ ಬಿಜೆಪಿ ಅಭ್ಯರ್ಥಿ ಜಗದೀಶ್ ಶೆಟ್ಟರ್ ಅವರ ಪ್ರಚಾರಾರ್ಥವಾಗಿ ಬೆಳಗಾವಿಗೆ ಬರುವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ