Breaking News

ಕೊಲ್ಲೂರು, ಕೋಟ, ಮಂದಾರ್ತಿಯಲ್ಲಿ ಆನ್‍ಲೈನ್ ಪೂಜೆಗೆ ಆಡಳಿತ ಮಂಡಳಿ ರೆಡಿ…….

Spread the love

ಉಡುಪಿ: ರಾಜ್ಯ ಸರ್ಕಾರದ ಹೊಸ ನಿಯಮದ ಪ್ರಕಾರ ಉಡುಪಿ ಜಿಲ್ಲೆಯಲ್ಲಿ ಮೂರು ಕಡೆ ಆನ್‍ಲೈನ್ ಪೂಜೆಗೆ ಅವಕಾಶ ನೀಡಲಾಗಿದೆ. ಕೊಲ್ಲೂರಿನಲ್ಲಿ ಈಗಾಗಲೇ ಭಕ್ತರಿಗೆ ಅವಕಾಶವಿದ್ದು, ಕೋಟ ಅಮೃತೇಶ್ವರಿ ಮತ್ತು ಮಂದಾರ್ತಿ ಕ್ಷೇತ್ರ ಹೊಸ ಸೇರ್ಪಡೆಯಾಗಿದೆ.

ರಾಜ್ಯಾದ್ಯಂತ ಮುಜರಾಯಿ ದೇವಸ್ಥಾನಗಳಲ್ಲಿ ಆನ್‍ಲೈನ್ ಪೂಜೆಗೆ ಸರ್ಕಾರ ಅವಕಾಶ ಮಾಡಿಕೊಟ್ಟಿದೆ. ಮುಜರಾಯಿ ಇಲಾಖೆಯಿಂದ ಉಡುಪಿ ಜಿಲ್ಲೆಯೊಳಗೆ ಮೂರು ದೇವಸ್ಥಾನಗಳಿಗೆ ಅವಕಾಶವಾಗಿದೆ. ಕೊಲ್ಲೂರು ಮೂಕಾಂಬಿಕಾ ದೇವಸ್ಥಾನದಲ್ಲಿ ಈಗಾಗಲೇ ಭಕ್ತರಿಗೆ ಬುಕ್ ಮಾಡಿ ಪೂಜೆ ಮಾಡಿಸಿ, ಪೋಸ್ಟ್ ಮೂಲಕ ಪ್ರಸಾದ ಪಡೆಯುವ ಅವಕಾಶ ಇತ್ತು. ಇದೀಗ ಕೋಟ ಅಮೃತೇಶ್ವರಿ, ಮಂದಾರ್ತಿ ದುರ್ಗಾ ಪರಮೇಶ್ವರಿ ದೇಗುಲದಲ್ಲಿ ಈ ಅವಕಾಶ ಕಲ್ಪಿಸಲಾಗಿದೆ. ಕ್ಷೇತ್ರಕ್ಕೆ ಬರಲು ಸಾಧ್ಯವಾಗದವರು ಈ ಅವಕಾಶ ಪಡೆಯಬಹುದು.

ಜೂನ್ 1 ರಿಂದ ನಮ್ಮಲ್ಲಿ ಆನ್‍ಲೈನ್ ಪೂಜೆ ಆರಂಭವಾಗಲಿದೆ ಎಂದು ಕೋಟ ಅಮೃತೇಶ್ವರಿ ದೇವಸ್ಥಾನ ಮಾಹಿತಿ ನೀಡಿದೆ. ಕೋಟ ಅಮೃತೇಶ್ವರಿ ದೇವರಿಗೆ ವಿಶೇಷ ಅಭಿಷೇಕ ಬೆಳಗ್ಗೆ ಸಂಪನ್ನವಾಗುತ್ತದೆ. ಅಲಂಕಾರ ಪೂಜೆ, ಮಂಗಳಾರತಿ ನಡೆಸಿ ಲಾಕ್ ಡೌನ್ ಸಂದರ್ಭದಲ್ಲಿ ಬಾಗಿಲು ಮುಚ್ಚುತ್ತಿದ್ದರು, ಜೂನ್ 1 ರಿಂದ ದೇವಸ್ಥಾನ ತೆರೆಯಲಿದ್ದು, ಭಕ್ತರಿಗೆ ದರ್ಶನ ಅವಕಾಶ ಸಿಗಲಿದೆ. ಇದನ್ನೂ ಓದಿ: ಆನ್‍ಲೈನ್‍ನಲ್ಲಿ ಮಾದಪ್ಪನ ದರ್ಶನ ಆರಂಭ

ಮಂದಾರ್ತಿ ದುರ್ಗಾಪರಮೇಶ್ವರಿ ದೇವಸ್ಥಾನದಲ್ಲಿ ಆನ್ ಲೈನ್ ಪೂಜೆಗೆ ಅವಕಾಶ ಆರಂಭವಾಗಿದೆ. ಭಕ್ತರು ಆನ್‍ಲೈನ್ ಮೂಲಕ ಪೂಜೆ ಬುಕ್ ಮಾಡಬಹುದು. ಸರ್ಕಾರದ ನಿಯಮದಂತೆ ಪೂಜೆ ನಡೆಸುತ್ತೇವೆ. ಜೂನ್ 1ರಿಂದ ಭಕ್ತರಿಗೆ ನೇರ ದರ್ಶನ ಅವಕಾಶವಿದೆ. ಸರ್ಕಾರದ ಸುತ್ತೋಲೆ ಈವರೆಗೆ ನಮ್ಮ ಕೈ ಸೇರಿಲ್ಲ. ದೇಗುಲ ತೆರವಿಗೆ ಎಲ್ಲಾ ಸ್ವಚ್ಛತೆ, ಸಿದ್ಧತೆ ಮಾಡುತ್ತೇವೆ ಎಂದು ಮಂದರ್ತಿ ದೇವಸ್ಥಾನ ಧರ್ಮದರ್ಶಿ ಧನಂಜಯ ಶೆಟ್ಟಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ ಮಹಿಳಾ ವಿಚಾರ ಗೋಷ್ಠಿ ಹಾಗೂ ಸಾಮಾನ್ಯ ಸಹಾಯ ಕೇಂದ್ರವನ್ನು ಉದ್ಘಾಟಿಸಿದೆ.

Spread the loveಹಿರೇ ಬಾಗೇವಾಡಿ ಗ್ರಾಮದಲ್ಲಿ‌ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಟ್ರಸ್ಟ್ (ರಿ) ವತಿಯಿಂದ ನಡೆದ ತಾಲೂಕು ಮಟ್ಟದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ