ಉಡುಪಿ: ಕರಾವಳಿ ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಉಡುಪಿ ಜಿಲ್ಲೆಯಲ್ಲಿ ಮುಂದಿನ ಐದು ದಿನಗಳ ಕಾಲ ಭಾರೀ ಮಳೆಯಾಗುವ ಸಾಧ್ಯತೆ ಇದೆ.
ಹವಾಮಾನ ಇಲಾಖೆ ಮುನ್ಸೂಚನೆ ಪ್ರಕಟಣೆ ಹೊರಡಿಸಿದ್ದು, ಇಂದಿನಿಂದ ಜೂನ್ 20ರ ವರೆಗೂ ಬಿರುಸಿನ ಮುಂಗಾರು ಸಾಧ್ಯತೆ ಇದೆ. ಹೀಗಾಗಿ ಇಂದು ಆರೆಂಜ್ ಅಲರ್ಟ್ ಘೋಷಣೆ ಮಾಡಲಾಗಿದೆ. ಅಲ್ಲದೇ ವಾರಾಂತ್ಯದವರೆಗೂ ಧಾರಾಕಾರ ಮಳೆ ಸುರಿಯಲಿದ್ದು, ಜಿಲ್ಲೆಯಲ್ಲಿ ಹಳದಿ ಅಲರ್ಟನ್ನು ಹವಾಮಾನ ಇಲಾಖೆ ಘೋಷಿಸಿದೆ.
ಒಂದು ವಾರದ ಅಂತರದಲ್ಲಿ ಸುಮಾರು 500 ಮಿಲಿಮೀಟರ್ ಮಳೆ ಬೀಳುವ ಸಾಧ್ಯತೆ ಇದೆ. ಗುಡುಗು ಮಿಶ್ರಿತ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕಡಲಿಗಿಳಿದು ಮೀನುಗಾರಿಕೆ ನಡೆಸುವಾಗ ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಡಳಿತ ಸೂಚನೆ ಕೊಟ್ಟಿದೆ. ಜೊತೆಗೆ ನದಿ ಮತ್ತು ಸಮುದ್ರ ತೀರಕ್ಕೆ ಸಾರ್ವಜನಿಕರು ತೆರಳಬಾರದು ಎಂದು ನದಿ ಪಾತ್ರದ ಜನರಿಗೆ ಎಚ್ಚರಿಕೆಯನ್ನು ನೀಡಲಾಗಿದೆ.