Breaking News
Home / ಅಂತರಾಷ್ಟ್ರೀಯ / ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

ಡಿಕೆ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ -ಸಂಸದೆ ಶೋಭಾ

Spread the love

ಉಡುಪಿ: RR ನಗರದಿಂದ ದಿ. ಡಿಕೆ ರವಿ ಪತ್ನಿ ಕಾಂಗ್ರೆಸ್ ಅಭ್ಯರ್ಥಿ ಕುಸುಮಾ ಸ್ಪರ್ಧೆಗೆ ಇಳಿದಿರುವ ವಿಚಾರಕ್ಕೆ ಸಂಬಂಧಿಸಿ ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ ಎಂದು ಸಂಸದೆ ಶೋಭಾ ಕೆರಂದ್ಲಾಜೆ ಹೇಳಿಕೆ ನೀಡಿದ್ದಾರೆ.

ಈ ಬಗ್ಗೆ ಮಾತನಾಡಿದ ಶೋಭಾ ಡಿಕೆ.ರವಿ ವಿಚಾರ ಚರ್ಚೆಯ ವಿಷಯವೇ ಅಲ್ಲ. ಡಿಕೆ ರವಿ ಓರ್ವ ದಕ್ಷ ಅಧಿಕಾರಿಯಾಗಿದ್ರು, ಆದ್ರೆ ಇಂದು ಅವರು ನಮ್ಮ ಜೊತೆಯಲಿಲ್ಲ. ರವಿ ಹೆಸರನ್ನು ಯಾರು ಬಳಸಿಕೊಂಡರೂ ಅವರಿಗೆ ಒಳ್ಳೆದಾಗಲ್ಲ.

ಅವರು ಬದುಕಿದ್ದಾಗ ಕುಸುಮಾ ಕುಟುಂಬ ಏನು ಮಾಡಿತ್ತು? ರವಿಯ ಮಾವ ಏನು‌ ಮಾಡಿದ್ರು?
ರವಿ ಸತ್ತ ತಕ್ಷಣ ಕುಸುಮಾ ಅವರು ಎಲ್ಲಿಗೆ ಹೋದರು? ಯಾಕೆ ಹೋದರು? ಇದೆಲ್ಲವೂ ಚರ್ಚೆಯಾಗುತ್ತದೆ.

ಇದಕ್ಕಾಗಿ ಅವರು ರವಿ ಹೆಸರು ಪ್ರಸ್ತಾಪಿಸದೆ ಇರೋದು ಒಳ್ಳೆಯದು. ರವಿ ಬಗ್ಗೆ ಅವರ ಪತ್ನಿಯ ಬಗ್ಗೆ ಚರ್ಚೆ ಮಾಡುವ ಅಗತ್ಯ ಇಲ್ಲ. ಡಿಕೆ ರವಿ ಸಾವಿನಿಂದ ಅವರ ತಂದೆ ತಾಯಿಗೆ ಆದ ಅವಮಾನ ಅವರ ಕೆಟ್ಟ ಪರಿಸ್ಥಿತಿ ಎಲ್ಲವೂ ಚರ್ಚೆಯ ವಿಷಯವಾಗಿದೆ. ಚುನಾವಣಾ ವಿಷಯದಲ್ಲಿ ಇದೆಲ್ಲಾ ಪ್ರಸ್ತಾಪ ಆಗೋದು ಒಳ್ಳೆಯದಲ್ಲ. ಒಂದು ವೇಳೆ ಅವಳು ಚರ್ಚೆಗೆ ತೆಗೆದರೆ ನಮ್ಮಲ್ಲೂ ಚರ್ಚೆಗೆ ಸಾಕಷ್ಟು ವಿಚಾರ ಇದೆ ಎಂದು ಎಚ್ಚರಿಕೆ ನೀಡಿದ್ದಾರೆ.


Spread the love

About Laxminews 24x7

Check Also

ಆರೋಪಿ ಫಯಾಜ್‌ ನ್ಯಾಯಾಂಗ ಬಂಧನಕ್ಕೆ!

Spread the loveಹುಬ್ಬಳ್ಳಿ : ಕಾಲೇಜು ಆವರಣದಲ್ಲಿ ವಿದ್ಯಾರ್ಥಿನಿಯ ಹತ್ಯೆ(student murder) ಆರೋಪಿ ಫಯಾಜ್‌(Fayaz) ಎಂಬುವವನನ್ನ ಕೋರ್ಟ್‌ ಇಂದು ನ್ಯಾಯಾಂಗ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ