Breaking News
Home / ಜಿಲ್ಲೆ / ಉಡುಪಿ / ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ

ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ

Spread the love

ಉಡುಪಿ: ಸಿಡಿಲು ತಾಗಿ ತೆಂಗಿನ ಮರವೊಂದು ಹೊತ್ತಿ ಉರಿದ ಘಟನೆ ಜಿಲ್ಲೆಯ ಹೆಬ್ರಿಯ ವಂಡರಬೆಟ್ಟಿನಲ್ಲಿ ನಡೆದಿದೆ.

ಉಡುಪಿಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಚಾರ ಯಶವಂತ ಕಾಮತ್ ಮನೆ ತೆಂಗಿನ ತೋಟದ ಮರವೊಂದಕ್ಕೆ ಸಿಡಿಲು ಬಡಿದಿದೆ. ಪರಿಣಾಮ ಹಸಿ ತೆಂಗಿನ ಮರ ಸಂಪೂರ್ಣ ಬೆಂಕಿಗೆ ಆಹುತಿಯಾಗಿದೆ. ಇನ್ನು ಮರಕ್ಕೆ ಬೆಂಕಿ ಹತ್ತಿರುವ ಫೋಟೋ ಮತ್ತು ವಿಡಿಯೋಗಳನ್ನು ಸ್ಥಳೀಯರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ.

ಉಡುಪಿಯ ಕುಂದಾಪುರ, ಕಾರ್ಕಳ ಪರಿಸರದಲ್ಲಿ ಭಾರೀ ಮಳೆಯಾಗಿದ್ದು, ಬಿಸಿಲ ಬೇಗೆಯಿಂದ ಬಳಲಿದ್ದ ಜನಕ್ಕೆ ವರುಣದೇವ ತಂಪು ನೀಡಿದ್ದಾನೆ. ಜಿಲ್ಲೆಯಾದ್ಯಂತ ಮೋಡ ಕವಿದ ವಾತಾವರಣವಿದ್ದು, ರಾತ್ರಿ ಸಹ ಮಳೆಯಾಗುವ ಸಾಧ್ಯತೆಗಳಿವೆ.

ಚಿಕ್ಕಮಗಳೂರುಇ ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರದಲ್ಲಿ ಮಳೆಯಾಗಿದೆ. ಮೂಡಿಗೆರೆಯ ಬಣಕಲ್, ಕೊಟ್ಟಿಗೆಹಾರ, ಬಾಳೂರು, ಜಾವಳಿಯಲ್ಲಿ ಭಾರೀ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ಥವಾಗಿದೆ. ಹಾಸನ, ವಿಜಯಪುರ, ಧಾರವಾಡ, ಯಾದಗಿರಿಯಲ್ಲಿಯೂ ಮಳೆಯಾಗಿದೆ.


Spread the love

About Laxminews 24x7

Check Also

ಬಾಲಕಿಗೆ ಪ್ರೀತಿಸುವಂತೆ ಕಿರುಕುಳ : ಮೆಸ್ಕಾಂ ಸಿಬ್ಬಂದಿ ಪೊಲೀಸರ ವಶಕ್ಕೆ

Spread the loveಪುತ್ತೂರು(ಡಿಸೆಂಬರ್​. 22): ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರಿನ ಸವಣೂರು ಸಮೀಪದ‌ ನಿವಾಸಿಯಾಗಿರುವ ಪಿಯುಸಿ ಓದುತ್ತಿರುವ ಬಾಲಕಿಗೆ ಸಾಮಾಜಿಕ ಜಾಲತಾಣದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ