Breaking News

ಪ್ರೇಮ ಪ್ರಕರಣ ರಾಜಿ ಪಂಚಾಯ್ತಿ ವೇಳೆ ಮಲ್ಪೆ ಮೀನುಗಾರರ ಮುಖಂಡನಿಗೆ ಚಾಕು ಇರಿತ

Spread the love

ಉಡುಪಿ: ಪ್ರೇಮ  ಪ್ರಕರಣ ರಾಜಿ ಪಂಚಾಯ್ತಿ ವೇಳೆ ಸ್ಥಳೀಯ ಮೀನುಗಾರರ ಮುಖಂಡನಿಗೆ  ಚಾಕು ಇರಿದ ಘಟನೆ ಉಡುಪಿ ಜಿಲ್ಲೆಯ ಮಲ್ಪೆಯಲ್ಲಿ ನಡೆದಿದೆ

ಮಂಜು ಕೊಳ ಯಾನೆ ಮಂಜುನಾಥ ಸಾಲಿಯಾನ್ ಚಾಕು ಇರಿತಕ್ಕೊಳಗಾದ ಮೀನುಗಾರರ ಮುಖಂಡ. ಮಲ್ಪೆ  ಯುವಕನ ಜೊತೆ ಪಡುಬಿದ್ರಿ ಪಲಿಮಾರು ಪರಿಸರದ ಯುವತಿಯ ಪ್ರೇಮ ಪ್ರಕರಣದ ಕುರಿತು ಮಾತುಕತೆಗೆ ಬಂದಿದ್ದ ಯುವತಿಯ ಕಡೆಯವರಿಂದ ಮೀನುಗಾರ ಮುಖಂಡನಿಗೆ ಚಾಕು ಇರಿಯಲಾಗಿದೆ. ಸದ್ಯ ಗಾಯಾಳು ಮಂಜು ಕೊಳ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಗಂಭೀರ ಗಾಯಗಳಿಲ್ಲದೆ ಅಪಾಯದಿಂದ ಪಾರಾಗಿದ್ದಾರೆ.

ಇರಿದ ಆರೋಪಿಗಳನ್ನು ಸ್ಥಳೀಯರು ಪತ್ತೆಮಾಡಿದ್ದಾರೆ. ಸದ್ಯ ಆರೋಪಿಗಳು ಪೊಲೀಸ್ ವಶದಲ್ಲಿದ್ದಾರೆ. ಘಟನೆ ಸಂಬಂಧ ಮಲ್ಪೆ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಪ್ರೇಯಸಿ ಜತೆ ನಿಶ್ಚಿತಾರ್ಥ ಮಾಡಿಕೊಂಡಿದ್ದಕ್ಕೆ ಹತ್ಯೆಗೈದ ಪ್ರಿಯಕರ

Spread the loveಗದಗ: ಜಿಲ್ಲೆಯ ಲಕ್ಷ್ಮೇಶ್ವರ ಹೊರವಲಯದ ಜಮೀನಲ್ಲಿ ಯುವಕ ಫಾರೂಕ್ ಸನದಿ  ಎನ್ನುವಾತನನ್ನು ಕತ್ತು ಕೊಯ್ದು ಬರ್ಬರವಾಗಿ ಹತ್ಯೆ ಮಾಡಿದ್ದು, …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ