Breaking News
Home / ಜಿಲ್ಲೆ / ಇಂಧನ ಬೆಲೆ ಗಗನಕ್ಕೆ: 108 ಕಿಮೀ ಕಾಲ್ನಡಿಗೆ ಜಾಥಾಗೆ ಸಿದ್ದರಾಮಯ್ಯ ಚಾಲನೆ

ಇಂಧನ ಬೆಲೆ ಗಗನಕ್ಕೆ: 108 ಕಿಮೀ ಕಾಲ್ನಡಿಗೆ ಜಾಥಾಗೆ ಸಿದ್ದರಾಮಯ್ಯ ಚಾಲನೆ

Spread the love

ಉಡುಪಿ: ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆ ವಿಚಾರ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಜಾಥಾ ಹಮ್ಮಿಕೊಳ್ಳಲಾಗಿದ್ದು, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಜಾಥಗೆ ಚಾಲನೆ ನೀಡದರು.

ದಕ್ಷಿಣ ಕನ್ನಡ ಜಿಲ್ಲೆಯ ಗಡಿಯಿಂದ ಉತ್ತರ ಕನ್ನಡ ಜಿಲ್ಲೆಯ ಗಡಿಯವರೆಗೆ ಈ ಪಾದಯಾತ್ರೆ ನಡೆಯಲಿದೆ.

ಒಟ್ಟು ಏಳು ದಿನಗಳ ಕಾಲ ಬರೋಬ್ಬರಿ 108 ಕಿಲೋಮೀಟರ್ ಪಾದಯಾತ್ರೆ ನಡೆಯಲಿದ್ದು, ಕಾಂಗ್ರೆಸ್‌ನ ರಾಜ್ಯ, ರಾಷ್ಟ್ರ ಮಟ್ಟದ ನಾಯಕರು ಪಾದಯಾತ್ರೆಯಲ್ಲಿ ಭಾಗಿಯಾಗಿದ್ದಾರೆ.

ಮಾಜಿ ಸಚಿವ ಯುಟಿ ಖಾದರ್, ಪ್ರಮೋದ್ ಮಧ್ವರಾಜ್ ವಿನಯಕುಮಾರ ಸೊರಕೆ, ಸಂಸದ ನಾಸಿರ್, ರಮಾನಾಥ ರೈ, ಪ್ರತಾಪ್ ಚಂದ್ರ ಶೆಟ್ಟಿ ಸೇರಿದಂತೆ ಹಲವು ನಾಯಕರು ಈ ಕಾಲ್ನಡಿಗೆ ಜಾಥಾದಲ್ಲಿ ಭಾಗಿಯಾಗಿದ್ದಾರೆ.

ಈ ಮೂಲಕ ಕೃಷಿ ಕಾನೂನುಗಳನ್ನು ವಿರೋಧಿಸಿ ದೆಹಲಿ ಗಡಿಗಳಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಗೆ ಬೆಂಬಲ ಹಾಗೂ ಬೆಲೆಯೇರಿಕೆ ವಿರುದ್ಧ ಜನಜಾಗೃತಿ ಮೂಡಿಸಲು ಮುಂದಾಗಿದೆ.


Spread the love

About Laxminews 24x7

Check Also

ಚಿಕ್ಕೋಡಿ: ಎಂದೂ ಬತ್ತದ ರಾಮಲಿಂಗೇಶ್ವರ ಬಾವಿ

Spread the love ಚಿಕ್ಕೋಡಿ: ತಾಲ್ಲೂಕಿನ ಉಮರಾಣಿ ಹೊರವಲಯದಲ್ಲಿರುವ ರಾಮಲಿಂಗ ದೇವಸ್ಥಾನ ಪೌರಾಣಿಕ ಹಾಗೂ ಐತಿಹಾಸಿಕ ಮಹತ್ವ ಹೊಂದಿದೆ. ಇಡೀ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ