Breaking News
Home / ಅಂತರಾಷ್ಟ್ರೀಯ / ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ……….

ಅಮೆರಿಕದಲ್ಲಿ ಮೈಸೂರಿನ ವೈದ್ಯೆಗೆ ವಿಶೇಷ ಗೌರವ……….

Spread the love

ವಾಷಿಂಗ್ಟನ್: ಅಮೆರಿಕದಲ್ಲಿ ಕೊರೊನಾ ಸೋಂಕಿತರ ಸೇವೆ ಸಲ್ಲಿಸಿ ಮನೆಗೆ ಮರಳಿದ ಮೈಸೂರು ಮೂಲದ ವೈದ್ಯೆ ಉಮಾ ಮಧುಸೂದನ್ ಅವರಿಗೆ ವಿಶೇಷ ಗೌರವ ಸಿಕ್ಕಿದೆ.

ಓಕ್‍ಲ್ಯಾಂಡ್‍ನ ಸೌತ್ ವಿಂಡ್ಸರ್ ಆಸ್ಪತ್ರೆ ಮತ್ತು ಸ್ಥಳೀಯ ಆಡಳಿತ ಡಾ.ಉಮಾ ಮಧುಸೂದನ್ ಅವರಿಗೆ ಡ್ರೈವ್ ಆಫ್ ಹಾನರ್ ಮೂಲಕ ಗೌರವ ಸಲ್ಲಿಸಿದೆ. ವೈದ್ಯ ಉಮಾ ಅವರ ಮನೆ ಎದುರು ನೂರಾರು ವಾಹನಗಳಲ್ಲಿ ಬಂದ ಜನ, ಅಂಬುಲೆನ್ಸ್ ಸಿಬ್ಬಂದಿ, ಅಗ್ನಿಶಾಮಕ ಪಡೆ, ಅಧಿಕಾರಿಗಳು ನಿಮ್ಮ ಸೇವೆ ಅನನ್ಯ ಎನ್ನುತ್ತಾ ಧನ್ಯವಾದ ತಿಳಿಸಿವೆ. ಮೈಸೂರು ಮೂಲದ ವೈದ್ಯೆಗೆ ಈ ಗೌರವ ಸಿಕ್ಕಿರುವುದಕ್ಕೆ ಸಾಂಸ್ಕೃತಿಕ ನಗರಿ ಮಂದಿ ಹಿರಿಹಿರಿ ಹಿಗ್ಗಿದ್ದಾರೆ.

ಕೊರೊನಾ ವೈರಸ್ ವಿರುದ್ಧದ ಹೋರಾಟದಲ್ಲಿ ಸಮಾಜದ ನಿಜವಾದ ಸೂಪರ್ ಹೀರೋಗಳಾದ ವೈದ್ಯರು, ವೈದ್ಯಕೀಯ ಸಿಬ್ಬಂದಿ ಪಟ್ಟುಬಿಡದೆ ಕೆಲಸ ಮಾಡುತ್ತಿದ್ದಾರೆ. ಪ್ರಪಂಚದಾದ್ಯಂತದ ಅನೇಕರು ಕೊರೊನಾ ವಾರಿಯರ್ಸ್ ಗಳಿಗೆ ಧನ್ಯವಾದ ಅರ್ಪಿಸುತ್ತಿದ್ದಾರೆ. ಅಂತಹ ವಿಡಿಯೋವನ್ನು ಇತ್ತೀಚೆಗೆ ಉದ್ಯಮಿ ಹರ್ಷ್ ಗೋಯೆಂಕಾ ಹಂಚಿಕೊಂಡಿದ್ದಾರೆ. ಈ ವಿಡಿಯೋದಲ್ಲಿ ಜನರ ಗುಂಪೊಂದು ವೈದ್ಯೆ ಡಾ.ಉಮಾ ಮಧುಸೂದನ್ ಅವರಿಗೆ ವಿಶೇಷ ರೀತಿಯಲ್ಲಿ ಧನ್ಯವಾದಗಳನ್ನು ಅರ್ಪಿಸಿದ್ದಾರೆ.

ಈ ವಿಡಿಯೋದಲ್ಲಿ ಡಾ.ಉಮಾ ಮಧುಸೂದನ್ ಅವರ ಮನೆಯ ಮುಂದೆ ಕಾರುಗಳಲ್ಲಿ ನೂರಾರು ಜನರು ಸಾಲು ಸಾಲಾಗಿ ಒಂದು ಅವರಿಗೆ ಧನ್ಯವಾದ ಸಲ್ಲಿಸಿದ್ದಾರೆ. ಹಾಗೇ ಉಮಾ ಅವರು ಕೂಡ ಕೊರೊನಾ ವಿರುದ್ಧ ಹೋರಾಡಿ ಗೆದ್ದವರಿಗೆ ಒಳ್ಳೆಯದಾಗಲಿ ಎಂದು ಹಾರೈಸಿದ್ದಾರೆ.


Spread the love

About Laxminews 24x7

Check Also

*ಶ್ರೀ ಜಡಿಸಿದ್ದೇಶ್ವರ ದೇವಸ್ಥಾನದಲ್ಲಿ ಶ್ರೇಷ್ಠ ಫೌಂಡೇಶನ್ ವತಿಯಿಂದ ಅನ್ನಸಂತರ್ಪಣೆ ಕಾರ್ಯಕ್ರಮ*

Spread the loveಮೂಡಲಗಿ : ಸೌಭಾಗ್ಯ ಲಕ್ಷ್ಮಿ ಶುಗರ್ಸ್ ಚೇರಮನ್ ರಾದ ಸಂತೋಷ ಜಾರಕಿಹೊಳಿ ಅವರ “ಶ್ರೇಷ್ಠ ಫೌಂಡೇಶನ್” ವತಿಯಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ