Breaking News

ಗುಜರಾತ್‌ನಲ್ಲಿ ನಿರ್ಮಾಣ ಹಂತದ ಕಟ್ಟಡ ಕುಸಿತ – 15 ಕಾರ್ಮಿಕರು ಸಿಲುಕಿರೋ ಶಂಕೆ

Spread the love

ಗಾಂಧಿನಗರ: ಗುಜರಾತ್‌ನ ಗಾಂಧಿನಗರ ಸಮೀಪದ ಕುಡಾಸನ್ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಕಟ್ಟಡದ ಒಂದು ಭಾಗ ಕುಸಿದು ಬಿದ್ದಿದ್ದು, ಸುಮಾರು 10 ರಿಂದ 15 ಕಾರ್ಮಿಕರು ಅವಶೇಷಗಳಡಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ.

ಕಟ್ಟಡ ಕುಸಿದಿರುವ ಮಾಹಿತಿ ತಿಳಿಯುತ್ತಿದ್ದಂತೆ ಅಗ್ನಿಶಾಮಕ ದಳದ ತಂಡಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಹಾಗೂ ಶೋಧ ಕಾರ್ಯಾಚರಣೆ ಆರಂಭಿಸಿವೆ.

ಅಧಿಕಾರಿಗಳ ಪ್ರಕಾರ, ಇದುವರೆಗೆ ಎಂಟು ಕಾರ್ಮಿಕರನ್ನು ಅವಶೇಷಗಳಿಂದ ಸುರಕ್ಷಿತವಾಗಿ ರಕ್ಷಿಸಲಾಗಿದೆ. ಇನ್ನೂ 10 ರಿಂದ 15 ಮಂದಿ ಕಟ್ಟಡದ ಅವಶೇಷಗಳಡಿ ಸಿಲುಕಿರುವ ಸಾಧ್ಯತೆ ಇರುವುದರಿಂದ ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ. ಅವಶೇಷಗಳನ್ನು ತೆರವುಗೊಳಿಸಿ ಅದರೊಳಗೆ ಸಿಲುಕಿರುವವರನ್ನು ಪತ್ತೆಹಚ್ಚಲು ರಕ್ಷಣಾ ಸಿಬ್ಬಂದಿ ತೀವ್ರವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಸ್ಥಳದಲ್ಲಿ ಅಗ್ನಿಶಾಮಕ ದಳದ ತಂಡಗಳು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿವೆ. ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭ್ಯವಾಗಬೇಕಿದೆ ಎಂದು ಅಗ್ನಿಶಾಮಕ ಅಧಿಕಾರಿ ರಾಜೇಶ್ ಪಟೇಲ್ ತಿಳಿಸಿದ್ದಾರೆ.


Spread the love

About Laxminews 24x7

Check Also

ಮಹರ್ಷಿ ವಾಲ್ಮೀಕಿ ನಮ್ಮ ಜೀವನಕ್ಕೆ ದಾರಿದೀಪ: ಎನ್. ಬಿ.ಪಾಟೀಲ

Spread the loveಮಹಾಲಿಂಗಪುರ: ರಾಮಾಯಣ ಮಹಾಕಾವ್ಯದ ಮೂಲಕ ಸತ್ಯ, ಧರ್ಮ, ತ್ಯಾಗ, ಕರ್ತವ್ಯ ಮತ್ತು ಮಾನವೀಯ ಮೌಲ್ಯಗಳ ಮಹತ್ವವನ್ನು ಜಗತ್ತಿಗೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ