Breaking News

ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ: ಸಿಜೆಐ

Spread the love

ನವದೆಹಲಿ: ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ. ಅವರಲ್ಲಿ ಸೋಷಿಯಲ್‌ ಮೀಡಿಯಾ ಬಳಕೆದಾರರು, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ. ಈ ವ್ಯವಸ್ಥೆ ಮೇಲೆ ದಾಳಿ ಮಾಡುತ್ತಾರೆ ಎಂದು ಸುಪ್ರೀಂ ಕೋರ್ಟ್‌ನ ಸಿಜೆಐ ಸೂರ್ಯ ಕಾಂತ್‌  ಅವರು ಕಿಡಿಕಾರಿದ್ದಾರೆ.

ಸಿಜೆಐ ಸೂರ್ಯ ಕಾಂತ್ ಮತ್ತು ನ್ಯಾಯಮೂರ್ತಿ ಜೋಯ್ಮಲ್ಯ ಬಾಗ್ಚಿ ಅವರನ್ನೊಳಗೊಂಡ ಪೀಠದ ಮುಂದೆ ವಕೀಲರೊಬ್ಬರನ್ನು ಹಿರಿಯ ವಕೀಲರನ್ನಾಗಿ ನೇಮಿಸುವ ಬಗ್ಗೆ ಸಲ್ಲಿಸಲಾದ ಅರ್ಜಿಯ ವಿಚಾರಣೆಯ ಸಂದರ್ಭದಲ್ಲಿ ಈ ಹೇಳಿಕೆ ನೀಡಿದ್ದಾರೆ.

ದೆಹಲಿ ಹೈಕೋರ್ಟ್ ಅರ್ಜಿದಾರರಿಗೆ ಹಿರಿಯ ವಕೀಲ ಹುದ್ದೆಯನ್ನು ನೀಡಿದರೆ, ಅವರ ವೃತ್ತಿಪರ ನಡವಳಿಕೆಯನ್ನು ಗಮನದಲ್ಲಿಟ್ಟುಕೊಂಡು ಸುಪ್ರೀಂ ಕೋರ್ಟ್ ಅದನ್ನು ರದ್ದುಗೊಳಿಸುತ್ತದೆ ಎಂದು ಸಿಜೆಐ ಸೂರ್ಯ ಕಾಂತ್ ತಿಳಿಸಿದ್ದಾರೆ.

ವಕೀಲರ ಸಾಮಾಜಿಕ ಮಾಧ್ಯಮ ನಡವಳಿಕೆಯನ್ನು ಉಲ್ಲೇಖಿಸಿದ ಸಿಜೆಐ, ಸಮಾಜದಲ್ಲಿ ಈಗಾಗಲೇ ವ್ಯವಸ್ಥೆಯ ಮೇಲೆ ದಾಳಿ ಮಾಡುವ ಪರಾವಲಂಬಿಗಳು ಇದ್ದಾರೆ. ನೀವು ಅವರೊಂದಿಗೆ ಕೈಜೋಡಿಸಲು ಬಯಸುತ್ತೀರಾ ಎಂದು ಪ್ರಶ್ನಿಸಿದ್ದಾರೆ.

ಯುವಕರು ಜಿರಳೆಗಳಂತೆ ಇದ್ದಾರೆ. ಅವರಿಗೆ ಯಾವುದೇ ಉದ್ಯೋಗ ಸಿಗುವುದಿಲ್ಲ. ವೃತ್ತಿಯಲ್ಲಿ ಯಾವುದೇ ಸ್ಥಾನವಿಲ್ಲ. ಅವರಲ್ಲಿ ಕೆಲವರು ಮಾಧ್ಯಮ, ಸಾಮಾಜಿಕ ಮಾಧ್ಯಮ, ಆರ್‌ಟಿಐ ಕಾರ್ಯಕರ್ತರು ಇರುತ್ತಾರೆ ಎಂದು ಹೇಳಿದ್ದಾರೆ. 


Spread the love

About Laxminews 24x7

Check Also

ಪತಿಗಿಂತ ಹೆಚ್ಚು ದುಡಿಯುವ ಪತ್ನಿಗೆ ಪತಿ ಜೀವನಾಂಶ ನೀಡಬೇಕಿಲ್ಲ: ಹೈಕೋರ್ಟ್‌

Spread the loveಬೆಂಗಳೂರು: ಪತಿಗಿಂತ  ಹೆಚ್ಚು ದುಡಿಯುವ ಪತ್ನಿಗೆ  ಜೀವನಾಂಶ ನೀಡಬೇಕಿಲ್ಲ ಎಂದು ನ್ಯಾ. ಡಾ. ಚಿಲ್ಲಕೂರ್ ಸುಮಲತಾ ಅವರಿದ್ದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ