ರಾಯಚೂರು: ಕಾರಿಗೆ ಹಿಂದಿನಿಂದ ಅಪರಿಚಿತ ವಾಹನ ಡಿಕ್ಕಿ ಹೊಡೆದ ಪರಿಣಾಮ ಕಾರು ಪಲ್ಟಿಯಾಗಿ ದಂಪತಿ ಸಾವನ್ನಪ್ಪಿದ್ದು, ಓರ್ವ ಗಂಭೀರ ಗಾಯಗೊಂಡಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ಹೊಸಳ್ಳಿ ಕ್ಯಾಂಪ್ ಬಳಿ ನಡೆದಿದೆ.
ಬಳ್ಳಾರಿಯ ಇಂದಿರಾನಗರದ 27 ವರ್ಷದ ರಾಘವೆಂದ್ರ, 26 ವರ್ಷದ ಹೇಮಲತಾ ಮೃತ ದಂಪತಿ. ಹಿಂಬದಿ ಸೀಟಿನಲ್ಲಿ ಕುಳಿತಿದ್ದ ರವಿಕುಮಾರ್‌ಗೆ ಗಂಭೀರ ಗಾಯಗಳಾಗಿದ್ದು, ಸಿಂಧನೂರು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಸಿಂಧನೂರಿನಿಂದ ಬಳ್ಳಾರಿಗೆ ಹೊರಟಿದ್ದ ಸ್ವಿಫ್ಟ್ ಡಿಸೈರ್ ಕಾರಿಗೆ ಅಪರಿಚಿತ ವಾಹನ ಡಿಕ್ಕಿಹೊಡೆದು ಪರಾರಿಯಾಗಿದೆ. ಸಿಂಧನೂರು ಸಂಚಾರಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7