Breaking News

ಉನ್ನಾವೋ ಸಂತ್ರಸ್ತೆಯ ಕೊಲೆ ಪ್ರಕರಣದಲ್ಲಿ ಬಿಜೆಪಿ ಶಾಸಕ ಕುಲ್‌ದೀಪ್‌ಗೆ 10 ವರ್ಷ ಜೈಲು..

Spread the love

ನವದೆಹಲಿ,ಮಾ.13- ಇಡೀ ದೇಶವನ್ನೇ ಬೆಚ್ಚಿಬೀಳಿಸಿದ್ದ ಉನ್ನಾವೊ ಸಾಮೂಹಿಕ ಅತ್ಯಾಚಾರ ಪ್ರಕರಣದ ಸಂತ್ರಸ್ತೆಯ ತಂದೆಯ ಕೊಲೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ದೆಹಲಿಯ ನ್ಯಾಯಾಲಯವೊಂದು ಉಚ್ಛಾಟಿತ ಬಿಜೆಪಿ ಶಾಸಕ ಕುಲ್‍ದೀಪ್ ಸಿಂಗ್ ಸೆನಗರ್‍ಗೆ 10 ವರ್ಷ ಜೈಲು ಶಿಕ್ಷೆ ವಿಧಿಸಿದೆ. ಜಿಲ್ಲಾ ನ್ಯಾಯಾಧೀಶ ಧರ್ಮೇಶ್ ಶರ್ಮ ಅವರು ಕುಲ್‍ದೀಪ್ ಮತ್ತು ಆತನ ಸಹೋದರ ಅತುಲ್ ಸಿಂಗ್ ಸೆನಗರ್ ಅವರಿಗೆ ಸಂತ್ರಸ್ತ ಕುಟುಂಬಕ್ಕೆ ತಲಾ 10 ಲಕ್ಷ ರೂ.ಗಳಂತೆ 20 ಲಕ್ಷ ರೂ.ಗಳ ಪರಿಹಾರ ನೀಡುವಂತೆಯೂ ಆಗ್ರಹಿಸಿದರು.

ತಮ್ಮ ಪುತ್ರಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಮತ್ತು ಮಾರಕ ಹಲ್ಲೆ ಕೃತ್ಯವನ್ನು ಪ್ರತಿಭಟಿಸಿದ ಉತ್ತರ ಪ್ರದೇಶದ ಉನ್ನಾವೋ ಗ್ರಾಮದ ವ್ಯಕ್ತಿಯನ್ನು ಪೊಲೀಸ್ ಠಾಣೆಗೆ ವಿಚಾರಣೆಗಾಗಿ ಕರೆಸಲಾಗಿತ್ತು. 2018, ಏ.29ರಂದು ಪೊಲೀಸ್ ಕಸ್ಟಡಿಯಲ್ಲಿ ಅವರು ಮೃತಪಟ್ಟಿದ್ದರು. ಈ ಪ್ರಕರಣ ಉತ್ತರಪ್ರದೇಶಾದ್ಯಂತ ಭಾರೀ ಆಕ್ರೋಶ ಮತ್ತು ಚರ್ಚೆಗೆ ಕಾರಣವಾಯಿತು.


Spread the love

About Laxminews 24x7

Check Also

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್!

Spread the loveಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ; 20 ಬೈಕ್‌ಗಳ ಸಮೇತ ಅಂತರಜಿಲ್ಲಾ ಖದೀಮರ ಗ್ಯಾಂಗ್ ಅರೆಸ್ಟ್! • ಬೃಹತ್ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ