Breaking News

ಉತ್ತರ ಪ್ರದೇಶದಲ್ಲಿ ಮುಂದುವರಿದ ಪೈಶಾಚಿಕ ಕೃತ್ಯ

Spread the love

ಫತೇಪುರ್: ಇಬ್ಬರು ಅಪ್ರಾಪ್ತ ಸಹೋದರಿಯರನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಉತ್ತರಪ್ರದೇಶದ ಫತೇಪುರ್ ಜಿಲ್ಲೆಯ ಅಶೋಧರ ಪ್ರದೇಶದ ಹಳ್ಳಿಯೊಂದರಲ್ಲಿ ನಡೆದಿದೆ.

12 ಹಾಗೂ 8 ವರ್ಷದ ಬಾಲಕಿಯರನ್ನು ಹತ್ಯೆ ಮಾಡಲಾಗಿದ್ದು, ಅವರ ದೇಹದ ಮೇಲೆ ಗಾಯದ ಗುರುತುಗಳು ಕಂಡು ಬಂದಿವೆ. ಗ್ರಾಮದ ಹೊರವಲಯದಲ್ಲಿರುವ ಕೊಳದಲ್ಲಿ ಬಾಲಕಿಯರ ಮೃತದೇಹಗಳು ಕಂಡುಬಂದಿವೆ ಎಂದು ಸಹಾಯಕ ಪೊಲೀಸ್ ಅಧೀಕ್ಷಕ ರಾಜೇಶ್ ಕುಮಾರ್ ಮಾಹಿತಿ ನೀಡಿದ್ದಾರೆ.

ಬಾಲಕಿಯರ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ ಹತ್ಯೆ ಮಾಡಲಾಗಿದೆ ಎಂದು ಕುಟುಂಬದವರು ಆರೋಪಿಸಿದ್ದು ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಕೈಗೊಂಡಿದ್ದಾರೆ. ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.


Spread the love

About Laxminews 24x7

Check Also

ಮೂರು ಮಕ್ಕಳ ತಾಯಿಯನ್ನು ಕತ್ತು ಸೀಳಿ ಕೊಂದ ಪ್ರಿಯಕರ

Spread the loveದಾವಣಗೆರೆ: ವ್ಯಕ್ತಿಯೊಬ್ಬ ಪ್ರಿಯತಮೆಯ ಕತ್ತು ಸೀಳಿ ಹತ್ಯೆಗೈದ  ಘಟನೆ ದಾವಣಗೆರೆಯ  ಶೇಖರಪ್ಪ ನಗರದಲ್ಲಿ ನಡೆದಿದೆ. ನಾಗರತ್ನ (45) …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ