Breaking News

ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ.

Spread the love

ಉಡುಪಿ: ಚಿಂತಾಜನಕ ಸ್ಥಿತಿಯಲ್ಲಿದ್ದ ಯುವತಿಯನ್ನು ಆಸ್ಪತ್ರೆಗೆ ಬಿಟ್ಟು ಯುವಕ ನಾಪತ್ತೆಯಾದ ಘಟನೆ ಉಡುಪಿಯಲ್ಲಿ ನಡೆದಿದೆ. ಆದರೆ ವಿಪರ್ಯಾಸ ಅಂದ್ರೆ ಆಸ್ಪತ್ರೆಗೆ ದಾಖಲಾದ ಕೆಲವೇ ಕ್ಷಣಗಳಲ್ಲಿ ಯುವತಿ ಮೃತಪಟ್ಟಿದ್ದಾಳೆ.

ನಿನ್ನೆ 6:30ರ ಹೊತ್ತಿಗೆ ರಿಕ್ಷಾದಲ್ಲಿ ಯುವತಿಯನ್ನು ಆಸ್ಪತ್ರೆಗೆ ಕರೆದು ತಂದಿದ್ದ ಯುವಕ, ಆಕೆಯ ಮನೆಯವರಿಗೆ ಕರೆಮಾಡಿ ವಿಷಯ ತಿಳಿಸಿ ತನ್ನ ಮೊಬೈಲ್ ಸ್ವಿಚ್ ಆಫ್ ಮಾಡಿಕೊಂಡು ನಾಪತ್ತೆಯಾಗಿದ್ದಾನೆ. ರಕ್ಷಿತಾ ನಾಯಕ್ ನಿಗೂಢವಾಗಿ ಸಾವನ್ನಪ್ಪಿರುವ ಯುವತಿ. ಹಿರಿಯಡ್ಕ ಠಾಣಾ ವ್ಯಾಪ್ತಿಯ ಕುಕ್ಕೆಹಳ್ಳಿ ನಿವಾಸಿಯಾಗಿರುವ ಯುವತಿ ಕೆಲಸ ಮತ್ತು ಶಿಕ್ಷಣದ ಉದ್ದೇಶಕ್ಕಾಗಿ ಉಡುಪಿ ನಗರದ ಅಂಬಾಗಿಲಿನಲ್ಲಿ ವಾಸವಾಗಿದ್ದಳು.

ಹದಿನೈದು ದಿನಕ್ಕೊಮ್ಮೆ ಮನೆಗೆ ಹೋಗಿ ಬರುತ್ತಿದ್ದಳು. ಪ್ರವೀಣ್ ಕುಂದರ್ ರಕ್ಷಿತಾಳನ್ನು ಚಿಂತಾಜನಕ ಸ್ಥಿತಿಯಲ್ಲಿ ಆಸ್ಪತ್ರೆಗೆ ಬಿಟ್ಟುಹೋದ ಯುವಕ.

ಸದ್ಯ ಹಿರಿಯಡ್ಕ ಪೊಲೀಸರು ಯುವಕನ ಪತ್ತೆಗಾಗಿ ಶೋಧ ಕಾರ್ಯ ಮುಂದುವರಿಸಿದ್ದಾರೆ. ರಕ್ಷಿತಾಳ ಮೃತದೇಹ ಮರಣೋತ್ತರ ಪರೀಕ್ಷೆಗಾಗಿ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಇನ್ನೂ ಕೂಡ ಯುವತಿಯ ಸಾವಿಗೆ ಕಾರಣವಾಗಲಿ ಅಥವಾ ಯುವಕನ ಬಗ್ಗೆ ಮಾಹಿತಿ ಸಿಕ್ಕಿಲ್ಲ.


Spread the love

About Laxminews 24x7

Check Also

ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ

Spread the love ಕಿರಾವಾಳೆಯ ಗೋರಕ್ಷನಾಥ ಮಠದಲ್ಲಿ ಕಳ್ಳತನ ಖಾನಾಪೂರ ತಾಲೂಕಿನ ಗುಂಜಿ ಬಳಿಯಿರುವ ಕಿರಾವಾಳೆಯ ಪ್ರಸಿದ್ಧ ಗೋರಕ್ಷನಾಥ ಮಠದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ