Breaking News

ಮನೆಯಲ್ಲಿ ಮಲಗಿದ್ದ ಯುವಕನ ಬರ್ಬರ ಹತ್ಯೆ

Spread the love

ಶಿವಮೊಗ್ಗ: ಮನೆಯಲ್ಲಿ ಮಲಗಿದ್ದ ಯುವಕನನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಶಿವಮೊಗ್ಗ  ತಾಲೂಕಿನ ಸುತ್ತುಕೋಟೆ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಪ್ರವೀಣ್ (29) ಕೊಲೆಯಾದ ಯುವಕ. ಈತ ಟ್ರ್ಯಾಕ್ಟರ್‌ ಬಾಡಿಗೆ ಹಾಗೂ ಇತರೆ ಕೆಲಸಗಳನ್ನು ಮಾಡಿಕೊಂಡಿದ್ದ. ಎಂದಿನಂತೆ ಗುರುವಾರ ರಾತ್ರಿ ಊಟ ಮುಗಿಸಿ ಮನೆಯಲ್ಲಿ ಮಲಗಿದ್ದಾಗ ಆತನನ್ನು ಹತ್ಯೆ ಮಾಡಲಾಗಿದೆ.

ಕೆಲಸಕ್ಕೆ ಬರುವಂತೆ ಹಿಂದಿನ ದಿನ ಕೆಲವು ಯುವಕರಿಗೆ ಪ್ರವೀಣ್ ತಿಳಿಸಿದ್ದ. ಇಂದು ಬೆಳಗ್ಗೆ ಯುವಕರು ಕರೆ ಮಾಡಿದಾಗ ಸ್ವೀಕರಿಸಿರಲಿಲ್ಲ. ಈ ಹಿನ್ನೆಲೆಯಲ್ಲಿ ಮನೆಗೆ ಬಂದು ಪರಿಶೀಲಿಸಿದಾಗ ಕೊಲೆ ನಡೆದಿರುವುದು ಬೆಳಕಿಗೆ ಬಂದಿದೆ.

ವ್ಯವಹಾರಿಕ ವೈಷಮ್ಯದ ಹಿನ್ನೆಲೆಯಲ್ಲಿ ಕೊಲೆ ನಡೆದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳಕ್ಕೆ ಕುಂಸಿ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ರವಾನಿಸಲಾಗಿದೆ.


Spread the love

About Laxminews 24x7

Check Also

ಜೂನ್ 20-21ಕ್ಕೆ ಮತ್ತೆ 6 ಜಿಲ್ಲೆಗಳಿಗೆ ಮುಂಗಾರು ಚುರುಕು – ಯೆಲ್ಲೋ ಅಲರ್ಟ್

Spread the loveಜೂನ್ 20 ಹಾಗೂ 21 ರಂದು ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಕೊಪ್ಪಳ, ರಾಯಚೂರಿಗೆ ಭಾರಿ ಮಳೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ