Breaking News

ಬೆಳಗಾವಿಯಲ್ಲಿ ಉರ್ದು ಶಾಲೆ ಶಿಕ್ಷಕನ ನೀಚ ಕೃತ್ಯ: ಧರ್ಮದೇಟು ನೀಡಿದ ಪಾಲಕರು

Spread the love

ಬೆಳಗಾವಿ: ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲೂಕಿನ ಗ್ರಾಮ ಒಂದರ ಉರ್ದು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕ ಶಾಲೆಯಲ್ಲೇ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಎಂಬ ಆರೋಪದ ಮೇಲೆ ಧರ್ಮದೇಟು ನೀಡಲಾಗಿದೆ.

ಧರ್ಮದೇಟು ತಿಂದ ಶಿಕ್ಷಕನ ಹೆಸರು ಶ್ರೀಶೈಲ ಕುಂಬಾರ. ಕಳೆದ 18 ವರ್ಷಗಳಿಂದ ಇದೇ ಉರ್ದು ಶಾಲೆಯಲ್ಲಿ ಕನ್ನಡ ಶಿಕ್ಷಕನಾಗಿ ಕೆಸಲ ಮಾಡುತ್ತಿದ್ದಾನೆ. 10 ನೇ ತರಗತಿಯಲ್ಲಿರುವ ವಿದ್ಯಾರ್ಥಿಗಳಿಗೆ ಈತ ನಿಮ್ಮನ್ನು 10ನೇ ತರಗತಿಯಲ್ಲಿ ಪಾಸ್ ಮಾಡಿಸುತ್ತೆನೆ ಎಂದು ಶೌಚಾಲಯದ ಬಳಿ ಕರೆದುಕೊಂಡು ಹೋಗಿ ಲೈಂಗಿಕ ಕಿರುಕುಳ ನೀಡಿದ್ದಾನೆ ಎನ್ನುವ ಆರೋಪ ಕೇಳಿ ಬಂದಿದೆ. ಹೀಗಾಗಿ ಇಂದು ಶಾಲೆಗೆ ಬಂದ ಪೋಷಕರು ಶಿಕ್ಷಕನಿಗೆ ಧರ್ಮದೇಟು ನೀಡಿ ಪೊಲೀಸರಿಗೆ ಒಪ್ಪಿಸಿದರು.

ಪೋಷಕರು ಶಾಲೆಯ ಮುಂದೆ ಜಮಾಯಿಸಿ ಶಿಕ್ಷಕನಿಗೆ ಧರ್ಮದೇಟು ನೀಡಿ ಗಲಾಟೆ ಮಾಡಿದ್ದರಿಂದ ಶಾಲೆಗೆ ಚಿಕ್ಕೋಡಿ ಪೊಲೀಸರು ಭೇಟಿ ನೀಡಿ ಶಿಕ್ಷಕ ಶ್ರೀಶೈಲನನ್ನು ವಶಕ್ಕೆ ಪಡೆದರು. ಇನ್ನು ಸುದ್ದಿ ತಿಳಿದ ಚಿಕ್ಕೋಡಿ ಶಿಕ್ಷಣ ಇಲಾಖೆ ಉಪನಿರ್ದೇಶಕ ಸೀತಾರಾಮ್ ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿ ಶಿಕ್ಷಕರು ಹಾಗೂ ಸ್ಥಳೀಯರು ಹಾಗೂ ವಿದ್ಯಾರ್ಥಿಗಳಿಂದ ಮಾಹಿತಿ ಪಡೆದು ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಇಒ ಕಡೆಯಿಂದ ವರದಿ ಕೇಳಿದರು. ಅಲ್ಲದೇ ತಕ್ಷಣಕ್ಕೆ ಜಾರಿಗೆ ಬರುವಂತೆ ಶಿಕ್ಷಕ ಶ್ರೀಶೈಲನನ್ನು ಅಮಾನತು ಆದೇಶ ಮಾಡಿದರು.


Spread the love

About Laxminews 24x7

Check Also

ವಂದೇ ಮಾತರಂನ ಮೊದಲ 2 ಚರಣ ಮಾತ್ರ ಹಾಡಬೇಕು – ಸರ್ಕಾರದ ಆದೇಶ ಪ್ರಶ್ನಿಸಿ ಹೈಕೋರ್ಟ್‌ಗೆ PIL

Spread the loveಬೆಂಗಳೂರು: ವಂದೇ ಮಾತರಂ  ಹಾಡಿನ ವಿವಾದ ರಾಜ್ಯ ಹೈಕೋರ್ಟ್  ಮೆಟ್ಟಿಲೇರಿದೆ. ಮೊದಲ 2 ಚರಣ ಮಾತ್ರ ಹಾಡಬೇಕು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ