Breaking News

ಇಂದಿರಾ ಕ್ಯಾಂಟೀನ್‌ನಲ್ಲಿ ಕೊಳೆತ ತರಕಾರಿ ಬಳಕೆ

Spread the love

ಮುಗಳಖೋಡ: ಪುರಸಭೆ ಎದುರು ಇರುವ ಇಂದಿರಾ ಕ್ಯಾಂಟಿನ್ ಆಹಾರ ತಯಾರಿಕೆ ಘಟಕದಲ್ಲಿ ಕೊಳೆತ ತರಕಾರಿ ಬಳಕೆ ಮಾಡುತ್ತಿರುವುದನ್ನು ಖಂಡಿಸಿ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ ಘಟನೆ ಸೋಮವಾರ ನಡೆದಿದೆ.
ಈ ಕುರಿತು ಪ್ರಶ್ನಿಸಿದಾಗ ಸಂಬಂಧಪಟ್ಟ ಸಿಬ್ಬಂದಿ ಸ್ಥಳದಿಂದ ಪರಾರಿಯಾಗಿದ್ದಾರೆ. ನಂತರ ನಾಗರಿಕರು ನೀಡಿದ ದೂರಿಗೆ ಪ್ರತಿಕ್ರಿಯಿಸಿದ ಪುರಸಭೆ ಮುಖ್ಯಾಧಿಕಾರಿ ಮಹೇಶ ಪವಾಡಿಶೆಟ್ಟಿ, ನಾಳೆ ಗುತ್ತಿಗೆದಾರರನ್ನು ಕರೆಯಿಸಿ ಇಂದಿರಾ ಕ್ಯಾಂಟೀನ್‌ಗೆ ಬರುವ ಗ್ರಾಹಕರಿಗೆ ಪರಿಶುದ್ಧ ಆಹಾರ ನೀಡಬೇಕು. ಇಲ್ಲದೇ ಹೋದರೆ ಟೆಂಡರ್ ರದ್ದುಪಡಿಸುವ ಎಚ್ಚರಿಕೆ ನೀಡಲಾಗುವುದು ಎಂದು ಭರವಸೆ ನೀಡಿದರು.
ಗ್ರಾಮಸ್ಥರ ಆಗ್ರಹದ ಮೇರೆಗೆ ಪುರಸಭೆ ಸಿಬ್ಬಂದಿ ಇಂದಿರಾ ಕ್ಯಾಂಟೀನ್‌ಗೆ ಬೀಗ ಹಾಕಿದರು. ಗ್ರಾಮಸ್ಥರಾದ ಚೇತನ ಯಡವನ್ನವರ, ರೈತ ಮುಖಂಡರಾದ ಶ್ರೀಶೈಲ ಅಂಗಡಿ, ಸುರೇಶ ಹೊಸಪೇಟಿ, ಕರೆಪ್ಪ ಮಂಟೂರ, ದುಂಡಪ್ಪ ಹಿಪ್ಪರಗಿ, ಅಶೋಕ ಕದಂ, ಅಣ್ಣಪ್ಪ ನಾವಿ, ಮಾರುತಿ ನಾವಿ, ಭೀಮಪ್ಪ ಯಡವನ್ನವರ ಇತರರಿದ್ದರು.

Spread the love

About Laxminews 24x7

Check Also

5 ಲಕ್ಷ ಜನರಿಗೆ ಉದ್ಯೋಗ, 1.5 ಕೋಟಿ ಮಾನವ ದಿನ ಸೃಷ್ಟಿಗೆ ಅವಕಾಶ: ಈಶ್ವರ್‌ ಖಂಡ್ರೆ

Spread the loveಬೆಂಗಳೂರು: ಜುಲೈ 1ರಿಂದ ಜಾರಿಗೆ ತರಲಾಗಿರುವ ಮನ್ರೇಗಾದ  ಬದಲಾದ ರೂಪ ವಿಬಿಜಿ ರಾಮ್ ಜಿ ಅಡಿಯಲ್ಲಿ  ಪ್ರತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ