Breaking News

ಹೆಚ್ಚಾದ ಬಿಸಿಲು: ಉ.ಕದ 9 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯ ಬದಲಾವಣೆ

Spread the love

ಬೆಳಗಾವಿ: ರಾಜ್ಯದಲ್ಲಿ ಹೆಚ್ಚುತ್ತಿರುವ ಬಿಸಿಲಿನ ತಾಪಮಾನವನ್ನು ಪರಿಗಣಿಸಿ, ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ.

ಹೌದು…ಬಿಸಿಲಿನ ತಾಪಮಾನದ ಹೆಚ್ಚಳ ಹಿನ್ನೆಲೆ ಕಿತ್ತೂರು ಕರ್ನಾಟಕದ ಎರಡು ಜಿಲ್ಲೆ, ಕಲ್ಯಾಣ ಕರ್ನಾಟಕದ 7 ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿ ಸಮಯವನ್ನು ಬದಲಾವಣೆ ಮಾಡಲಾಗಿದೆ. 2026ರ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಪ್ರಸ್ತುತ ಇರುವ ಕಚೇರಿ ವೇಳಾಪಟ್ಟಿಯ ಬದಲಾಗಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ನಿಗದಿ ಮಾಡಿ ಇಂದು (ಮಾರ್ಚ್ 31) ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.ಸರ್ಕಾರಿ ನೌಕರರು ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಈ ಕ್ರಮಕೈಗೊಳ್ಳಲಾಗಿದೆ.
ಬೆಳಗಾವಿ ವಿಭಾಗದ ಜಿಲ್ಲೆಗಳಾದ ವಿಜಯಪುರ, ಬಾಗಲಕೋಟೆ ಸರ್ಕಾರಿ ಕಚೇರಿಗಳ ಸಮಯ ಬದಲಾವಣೆ ಮಾಡಲಾಗಿದೆ. ಇನ್ನು ಕಲಬುರಗಿ ವಿಭಾಗಕ್ಕೆ ಒಳಪಡುವ ಬೀದರ್, ರಾಯಚೂರು, ಯಾದಗಿರಿ, ಕೊಪ್ಪಳ, ಬಳ್ಳಾರಿ, ವಿಜಯನಗರ ಜಿಲ್ಲೆಗಳಲ್ಲಿ ಸರ್ಕಾರಿ ಕಚೇರಿಗಳ ಕೆಲಸದ ಸಮಯವನ್ನು ಬೆಳಗ್ಗೆ 8 ರಿಂದ ಮಧ್ಯಾಹ್ನ 1:30ರ ತನಕ ನಿಗದಿ ಮಾಡಿದ್ದು, ಏಪ್ರಿಲ್, ಮೇ ತಿಂಗಳ ಅಂತ್ಯದವರೆಗೆ ಸರ್ಕಾರಿ ಕಚೇರಿ ಸಮಯ ಬದಲಾವಣೆ ಜಾರಿಯಲ್ಲಿ ಇರಲಿದೆ.
ಆದೇಶದಲ್ಲೇನಿದೆ? ಬೆಳಗಾವಿ ವಿಭಾಗದ ವಿಜಯಪುರ, ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದಿಂದ ನೌಕರರು ಕರ್ತವ್ಯ ನಿರ್ವಹಿಸುವಲ್ಲಿ ಎದುರಿಸುತ್ತಿರುವ ತೊಂದರೆಯನ್ನು ಮಾನವೀಯ ದೃಷ್ಟಿಯಿಂದ ಪರಿಗಣಿಸಿ, ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಕಚೇರಿ ಕೆಲಸದ ಸಮಯವನ್ನು ಬೆಳಿಗ್ಗೆ, 8.00 ರಿಂದ 1.30 ರವರೆಗೆ ನಿಗದಿಪಡಿಸಿ ಆದೇಶ ಹೊರಡಿಸುವಂತೆ ಕೋರಲಾಗಿದೆ. ಪ್ರಸ್ತಾಪಿಸಿದ ಜಿಲ್ಲೆಗಳಲ್ಲಿ ಬಿಸಿಲಿನ ತಾಪಮಾನ ಹೆಚ್ಚಾಗಿರುವುದನ್ನು ಪರಿಗಣಿಸಿ, ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಈ ಕೆಳಗಿನಂತೆ ಆದೇಶಿಸಿದೆ.
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2026ನೇ ಸಾಲಿನ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಹೆಚ್ಚಿನ ಬಿಸಿಲಿನ ತಾಪಮಾನದ ಹಿನ್ನೆಲೆಯಲ್ಲಿ ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಿಗೆ ಪ್ರಸ್ತುತ ಜಾರಿಯಲ್ಲಿರುವ ಸರ್ಕಾರಿ ಕಚೇರಿಗಳ ವೇಳಾಪಟ್ಟಿಯ ಬದಲಾಗಿ ಏಪ್ರಿಲ್ ಮತ್ತು ಮೇ ಮಾಹೆಗಳಲ್ಲಿ ಬೆಳಿಗ್ಗೆ 8.00 ಗಂಟೆಯಿಂದ ಮಧ್ಯಾಹ್ನ 1.30 ಗಂಟೆಯವರೆಗೆ ಬದಲಾವಣೆ ಮಾಡಿ ಆದೇಶಿಸಿದೆ.
ಇನ್ನು ಬೆಳಗಾವಿ ವಿಭಾಗದ ವಿಜಯಪುರ ಮತ್ತು ಬಾಗಲಕೋಟೆ ಹಾಗೂ ಕಲಬುರಗಿ ವಿಭಾಗದ ಎಲ್ಲಾ ಜಿಲ್ಲೆಗಳಲ್ಲಿನ ಸರ್ಕಾರಿ ನೌಕರರು ಬದಲಾದ ಸಮಯದಲ್ಲಿ ಎಂದಿನಂತೆ ಯಾವುದೇ ಲೋಪ, ಅಡೆತಡೆಯಿಲ್ಲದೆ ತಮ್ಮ ಕರ್ತವ್ಯವನ್ನು ನಿರ್ವಹಿಸತಕ್ಕದ್ದು, ಸಾರ್ವಜನಿಕರಿಗೆ ಯಾವುದೇ ಅನಾನುಕೂಲತೆಯಾಗದಂತೆ ಮತ್ತು ಜಿಲ್ಲಾಧಿಕಾರಿಗಳು ಅಥವಾ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳು ತುರ್ತು ಸಂದರ್ಭದಲ್ಲಿ ಯಾವುದೇ ಕಾರ್ಯವನ್ನು ನಿರ್ವಹಿಸಲು ನಿರ್ದೇಶಿಸಿದಲ್ಲಿ ಸಮಯದ ಪರಿಮಿತಿಯಿಲ್ಲದೆ ಕರ್ತವ್ಯ ನಿರ್ವಹಿಸತಕ್ಕದ್ದು ಎಂದು ಆದೇಶದಲ್ಲಿ ಉಲ್ಲೇಖಿಸಲಾಗಿದೆ.


Spread the love

About Laxminews 24x7

Check Also

ಅಂಕೋಲಾ : ಬೈಕಿಗೆ ಟಿಪ್ಪರ್ ಡಿಕ್ಕಿ ಹೊಡೆದು ಓರ್ವ ಸಾವು, ಇನ್ನೋರ್ವ ಗಂಭೀರ

Spread the loveಅಂಕೋಲಾ : ಬೈಕ್ ಮತ್ತು ಟಿಪ್ಪರ್ ನಡುವೆ ನಡೆದ ಅಪಘಾತದಲ್ಲಿ ಬೈಕ್ ಸವಾರ ಮೃತಪಟ್ಟು ಸಹಸವಾರ ಗಂಭೀರ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ