ಉತ್ತರ ಪ್ರದೇಶಕ್ಕೆ ಇಂದು ಐತಿಹಾಸಿಕ ದಿನವಾಗಿದ್ದು, 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್ಗೆ ಪ್ರಮಾಣವಚನ ಸ್ವೀಕಾರ ಮಾಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಪ್ರಧಾನಿ ಮೋದಿ, ಸಿಎಂ ಬೊಮ್ಮಾಯಿ ಭಾಗಿಯಾಗಲಿದ್ದಾರೆ.
ಉತ್ತರ ಪ್ರದೇಶದ ಐತಿಹಾಸಿಕ ದಿನಕ್ಕೆ ಕ್ಷಣಗಣನೆ ಶುರುವಾಗಿದ್ದು, 2ನೇ ಬಾರಿ ಸಿಎಂ ಆಗಿ ಯೋಗಿ ಆದಿತ್ಯನಾಥ್ಗೆ ಪಟ್ಟಾಭಿಷೇಕ ನಡೆಯಲಿದೆ.
ಸಂಜೆ 4 ಗಂಟೆಗೆ ಸಿಎಂ ಆಗಿ ಯೋಗಿ ಪ್ರಮಾಣ ವಚನ ಸ್ವೀಕಾರ ಮಾಡಲಿದ್ದು, ಅಟಲ್ ಬಿಹಾರಿ ವಾಜಪೇಯಿ ಕ್ರೀಡಾಂಗಣದಲ್ಲಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.
ಪದಗ್ರಹಣ ಕಾರ್ಯಕ್ರಮಕ್ಕೆ ಬೃಹತ್ ವೇದಿಕೆ ಸಿದ್ಧಗೊಂಡಿದ್ದು, ವಿಧಾನಸಭೆ ಚುನಾವಣೆಯಲ್ಲಿ ಬಹುಮತ ಪಡೆದಿದ್ದ ಬಿಜೆಪಿ, 37 ವರ್ಷಗಳಲ್ಲಿ ಮೊದಲ ಬಾರಿ ಸಿಎಂ ಆಗಿ 5 ವರ್ಷ ಪೂರೈಕೆಯಾಗಿದೆ.
UPಯಲ್ಲಿ ಸತತ 2ನೇ ಬಾರಿಗೆ ಅಧಿಕಾರಕ್ಕೆ ಬಂದ ಮೊದಲ ಸಿಎಂ ಯೋಗಿ ಆಗಿದ್ದು, 403 ಕ್ಷೇತ್ರಗಳ ಪೈಕಿ 255 ವಿಧಾನಸಭೆ ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಬಿಜೆಪಿ ಶೇಕಡ 41.29ರಷ್ಟು ಮತ ಪಡೆದು ಬಹುಮತ ಪಡೆದಿತ್ತು.
ಯೋಗಿ ಪದಗ್ರಹಣ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಭಾಗಿಯಾಗಲಿದ್ದು, ಪ್ರಧಾನಿ ಭವ್ಯ ಸಮಾರಂಭದಲ್ಲಿ ಮುಖ್ಯ ಅಥಿತಿಯಾಗಲಿದ್ದಾರೆ. ಗೃಹ ಸಚಿವ ಅಮಿತ್ ಶಾ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆಪಿ ನಡ್ಡಾ, ಕರ್ನಾಟಕ ಸಿಎಂ ಬಸವರಾಜ್ ಬೊಮ್ಮಾಯಿ ಭಾಗಿಯಾಗಲಿದ್ದು, ಕಾರ್ಯಕ್ರಮದಲ್ಲಿ ಬಾಲಿವುಡ್ ಸೆಲಬ್ರೆಟಿಗಳಾದ ಅಕ್ಷಯ್ ಕುಮಾರ್, ಕಂಗನಾ ರನೌತ್ ಮತ್ತು ಬೋನಿ ಕಪೂರ್, ದಿ ಕಾಶ್ಮೀರಿ ಫೈಲ್ಸ್ ಚಿತ್ರತಂಡ ಯೋಗಿ ಪಟ್ಟಾಭಿಷೇಕ ವೇಳೆ ಭಾಗಿಯಾಗಲಿದ್ದಾರೆ.
