Breaking News

ಸರ್ಕಾರಿ ಕಟ್ಟಡದೊಳಗೆ ನಮಾಜ್ – ಜೋಶಿಮಠದಲ್ಲಿ ಉದ್ವಿಗ್ನ ಪರಿಸ್ಥಿತಿ

Spread the love

ಡೆಹ್ರಾಡೂನ್: ಉತ್ತರಾಖಂಡದ ಐತಿಹಾಸಿಕ ಪವಿತ್ರ ಪಟ್ಟಣ ಜೋಶಿಮಠದ (Joshimath) ಸರ್ಕಾರಿ ಕಟ್ಟಡದೊಳಗೆ ನಮಾಜ್ ಮಾಡಿದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಸ್ಥಳೀಯರಲ್ಲಿ ಉದ್ವಿಗ್ನತೆ ಹೆಚ್ಚಾಗಿದೆ.

ನಗರ ಪಾಲಿಕೆಯಿಂದ ಕ್ರೀಡಾ ಇಲಾಖೆಗೆ ನೀಡಲಾಗಿರುವ ಒಂದು ಕಟ್ಟಡದಲ್ಲಿ ಟೇಬಲ್ ಟೆನ್ನಿಸ್ ಹಾಲ್ ನಿರ್ಮಾಣ ಮಾಡುವ ಉದ್ದೇಶವಿತ್ತು. ಆದರೆ ಕಳೆದ ಕೆಲವು ದಿನಗಳಿಂದ ಈ ಕಟ್ಟಡದೊಳಗೆ ಮುಸ್ಲಿಂ ಸಮುದಾಯದವರು ಅನುಮತಿಯಿಲ್ಲದೆ ಜಮಾತ್ ನಮಾಜ್ ಮಾಡುತ್ತಿದ್ದಾರೆ ಎಂಬ ಆರೋಪಗಳಿವೆ. ಭಕ್ತರ ಸಂಖ್ಯೆ ಕ್ರಮೇಣ ಹೆಚ್ಚಾಗುತ್ತಿರುವುದನ್ನು ತೋರಿಸುವ ವೀಡಿಯೊಗಳು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.

ಸ್ಥಳೀಯ ನಿವಾಸಿಗಳು ಮತ್ತು ಹಿಂದೂ ಸಂಘಟನೆಗಳು ಈ ಕ್ರಮವನ್ನು ವಿರೋಧಿಸಿ, ಸರ್ಕಾರಿ ಆಸ್ತಿಯನ್ನು ಧಾರ್ಮಿಕ ಕಾರ್ಯಕ್ಕೆ ಬಳಸುವುದು ಅಕ್ರಮ ಎಂದು ಆರೋಪಿಸಿ, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ. ಈ ಬಗ್ಗೆ ಪ್ರತಿಕ್ರಿಯಿಸಿರುವ ಗಢವಾಲ್ ಕಮಿಷನರ್ ವಿನಯ್ ಶಂಕರ್ ಪಾಂಡೆ, ಹಿಂದೂ ಸಂಘಟನೆಗಳು ಸಲ್ಲಿಸಿದ ಮನವಿಯ ಮೇಲೆ ಕ್ರಮ ಕೈಗೊಳ್ಳಲಾಗಿದ್ದು, ಸಮಸ್ಯೆಯನ್ನು ಪರಿಹರಿಸಲಾಗಿದೆ ಎಂದು ಹೇಳಿದ್ದಾರೆ.


Spread the love

About Laxminews 24x7

Check Also

ನಮ್ಗೆ 1 ವೋಟು, ಅಂಬಾನಿಗೆ 1 ಲಕ್ಷ ವೋಟ್‌ ಇರುತ್ತಾ? – ವಿಪಕ್ಷಗಳಿಗೆ ತೇಜಸ್ವಿ ಸೂರ್ಯ ತರಾಟೆ

Spread the loveನವದೆಹಲಿ: ಲೋಕಸಭೆ ಹಾಗೂ ವಿಧಾನಸಭೆಗಳಲ್ಲಿ ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ಕಲ್ಪಿಸಲು ಕ್ಷೇತ್ರ ಪುನರ್‌ವಿಂಗಡಣೆಗಾಗಿ ಸಂವಿಧಾನ (131ನೇ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ