Breaking News

ಸೈನಿಕರ ಅನುಕೂಲಕ್ಕೆ ಘಟಪ್ರಭಾದಲ್ಲಿ ಎಕ್ಸ್‌ಪ್ರೆಸ್ ರೈಲು ನಿಲುಗಡೆ, ಕರಾವಳಿಗೆ ವಂದೇ ಭಾರತ್ ವಿಸ್ತರಣೆಗೆ ಮನವಿ

Spread the love

ಮೂಡಲಗಿ: ಗೋಕಾಕ, ಮೂಡಲಗಿ, ಯರಗಟ್ಟಿ, ಹುಕ್ಕೇರಿ ಹಾಗೂ ಚಿಕ್ಕೋಡಿ ತಾಲೂಕುಗಳಿಗೆ ಸೇರಿದ ನೂರಾರು ಸೈನಿಕರು ಭಾರತದ ವಿವಿಧ ರಾಜ್ಯಗಳಲ್ಲಿ ದೇಶ ಸೇವೆಯಲ್ಲಿ ತೊಡಗಿಸಿಕೊಂಡಿದ್ದಾರೆ. ಈ ಸೈನಿಕರು ರಜೆ ಸಂದರ್ಭಗಳಲ್ಲಿ ತಮ್ಮ ಸ್ವಗ್ರಾಮಗಳಿಗೆ ಆಗಮಿಸಲು ಹಾಗೂ ಸೇವಾ ಸ್ಥಳಗಳಿಗೆ ಮರಳಲು ರೈಲು ಪ್ರಯಾಣವೇ ಪ್ರಮುಖ ಅವಲಂಬನೆಯಾಗಿದೆ. ಆದರೆ, ಈ ಭಾಗದ ಸೈನಿಕರಿಗೆ ಅನುಕೂಲವಾಗುವಂತೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ಇಲ್ಲದಿರುವುದು ದೀರ್ಘಕಾಲದ ಸಮಸ್ಯೆಯಾಗಿ ಉಳಿದಿದೆ.

ಈ ಹಿನ್ನೆಲೆಯಲ್ಲಿ, ರಾಜ್ಯಸಭಾ ಸಂಸದ ಈರಣ್ಣ ಕಡಾಡಿ ಅವರು ನವದೆಹಲಿಯಲ್ಲಿ ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ ಅವರನ್ನು ಭೇಟಿಯಾಗಿ, ಸೈನಿಕರ ಪ್ರಯಾಣ ಸೌಕರ್ಯವನ್ನು ಗಮನದಲ್ಲಿಟ್ಟುಕೊಂಡು ಘಟಪ್ರಭಾ ರೈಲು ನಿಲ್ದಾಣದಲ್ಲಿ ಹಲವು ಪ್ರಮುಖ ಎಕ್ಸ್‌ಪ್ರೆಸ್ ರೈಲುಗಳಿಗೆ ನಿಲುಗಡೆ ನೀಡುವಂತೆ ಮನವಿ ಸಲ್ಲಿಸಿದರು. ಈ ಐದು ತಾಲೂಕುಗಳ ಬಹುತೇಕ ಸೈನಿಕರು ರೈಲಿನ ಮೂಲಕವೇ ಪ್ರಯಾಣಿಸುತ್ತಾರೆ. ಹಲವು ದೀರ್ಘದೂರದ ರೈಲುಗಳು ಘಟಪ್ರಭಾ ಮಾರ್ಗವಾಗಿ ಸಂಚರಿಸುತ್ತಿದ್ದರೂ, ನಿಲುಗಡೆ ಇಲ್ಲದ ಕಾರಣ ಸೈನಿಕರು ಬೆಳಗಾವಿ ಅಥವಾ ಮೀರಜ್ ರೈಲು ನಿಲ್ದಾಣಗಳಿಗೆ ತೆರಳಿ ಅಲ್ಲಿಂದ ಪ್ರಯಾಣ ಆರಂಭಿಸಬೇಕಾದ ಪರಿಸ್ಥಿತಿ ಎದುರಿಸುತ್ತಿದ್ದಾರೆ. ಇದು ಸಮಯ, ವೆಚ್ಚ ಮತ್ತು ದೈಹಿಕ ತೊಂದರೆಗಳಿಗೆ ಕಾರಣವಾಗುತ್ತಿದೆ ಎಂದು ಸಂಸದರು ಸಚಿವರ ಗಮನಕ್ಕೆ ತಂದರು.

ಸೈನಿಕರ ಅನುಕೂಲಕ್ಕಾಗಿ ಕೆಳಕಂಡ ಎಕ್ಸ್‌ಪ್ರೆಸ್ ರೈಲುಗಳಿಗೆ ಘಟಪ್ರಭಾ ರೈಲು ನಿಲ್ದಾಣದಲ್ಲಿ ನಿಲುಗಡೆ ಕಲ್ಪಿಸಬೇಕು ಎಂದು ಮನವಿ ಮಾಡಲಾಗಿದೆ


Spread the love

About Laxminews 24x7

Check Also

ಜಾಮೀನಿಗಾಗಿ ನಕಲಿ ಆಧಾರ್, ಆರ್‌ಟಿಸಿ ಸಲ್ಲಿಕೆ: ಪತ್ತೆ ಹಚ್ಚಿದ ಕಾರವಾರ ನ್ಯಾಯಾಧೀಶರು

Spread the love ಕಾರವಾರ(ಉತ್ತರ ಕನ್ನಡ): ನಕಲಿ ಆಧಾರ್ ಕಾರ್ಡ್‌ಗಳು ಮತ್ತು ಆರ್‌ಟಿಸಿ (ಕಂದಾಯ ದಾಖಲೆಗಳು) ಬಳಸಿ ನ್ಯಾಯಾಲಯಕ್ಕೆ ವಂಚನೆ ಮಾಡಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ