Breaking News

ವಂಟಮೂರಿ ಮಹಿಳೆ ವಿವಸ್ತ್ರ ಕೇಸ್; 12 ಆರೋಪಿಗಳಿಗೆ 5 ವರ್ಷ ಕಠಿಣ ಶಿಕ್ಷೆ

Spread the love

ಬೆಳಗಾವಿ: ವಂಟಮೂರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ನಡೆಸಿದ ಪ್ರಕರಣದಲ್ಲಿ 12 ಜನ ಆರೋಪಿಗಳಿಗೆ ಐದು ವರ್ಷಗಳ ಕಠಿಣ ಶಿಕ್ಷೆಯನ್ನು ಬೆಳಗಾವಿಯ ಹೆಚ್ಚುವರಿ 10ನೇ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ವಿಧಿಸಿದೆ. ಈ ಕುರಿತು ನ್ಯಾಯಾಧೀಶ ಎಚ್.ಎಸ್. ಮಂಜುನಾಥ ಅವರು ತೀರ್ಪು ಪ್ರಕಟಿಸಿದ್ದಾರೆ. ಪ್ರಕರಣದಲ್ಲಿ ಒಟ್ಟು 12 ಸೆಕ್ಷನ್‌ಗಳ ಅಡಿಯಲ್ಲಿ ಆರೋಪ ಸಾಬೀತಾಗಿದ್ದು, ಪ್ರತಿಯೊಂದು ಸೆಕ್ಷನ್‌ಗೆ ಒಂದೊಂದು ಸಾವಿರ ರೂಪಾಯಿ ದಂಡವನ್ನೂ ವಿಧಿಸಲಾಗಿದೆ. ಆರೋಪಿಗಳಾದ ಬಸಪ್ಪ ನಾಯಿಕ, ರಾಜು ನಾಯಿಕ, ಕೆಂಪಣ್ಣ ನಾಯಿಕ, ಪಾರ್ವತಿ ನಾಯಕ, ಯಲ್ಲವ್ವ ನಾಯಿಕ, ಲಕ್ಕಪ್ಪ ನಾಯಿಕ, ಗಂಗವ್ವ ನಾಯಿಕ, ಸಂಗೀತಾ ಹೆಗ್ಗನಾಯಿಕ, ಸಂತೋಷ ನಾಯಿಕ, ಶೋಭಾ ನಾಯಿಕ, ಲಕ್ಕವ್ವ ನಾಯಿಕ ಹಾಗೂ ಶಿವಪ್ಪ ವನ್ನೂರಿಗೆ ಶಿಕ್ಷೆ ವಿಧಿಸಲಾಗಿದೆ. ತೀರ್ಪು ಪ್ರಕಟವಾಗುತ್ತಿದ್ದಂತೆ ಕೋರ್ಟ್‌ದಲ್ಲೇ ಆರೋಪಿಗಳು ಹಾಗೂ ಅವರ ಕುಟುಂಬಸ್ಥರು ಕಣ್ಣೀರು ಹಾಕಿದ್ದರು.

2023ರ ಡಿಸೆಂಬರ್ 10ರಂದು ಬೆಳಗಾವಿ ತಾಲೂಕಿನ ವಂಟಮೂರಿ ಗ್ರಾಮದಲ್ಲಿ ನಡೆದ ಅಮಾನವೀಯ ಘಟನೆ ರಾಜ್ಯದಾದ್ಯಂತ ಭಾರೀ ಆಕ್ರೋಶಕ್ಕೆ ಕಾರಣವಾಗಿತ್ತು. ಯುವಕ ತಾನು ಪ್ರೀತಿಸಿದ್ದ ಯುವತಿಯೊಂದಿಗೆ ಮನೆ ಬಿಟ್ಟು ಓಡಿಹೋಗಿದ್ದಕ್ಕೆ ಕೋಪಗೊಂಡ ಯುವತಿಯ ಕುಟುಂಬಸ್ಥರು, ಆತನ ಮನೆ ಮೇಲೆ ದಾಳಿ ನಡೆಸಿದ್ದರು. ನಂತರ ಆತನ ತಾಯಿಯನ್ನು ವಿವಸ್ತ್ರಗೊಳಿಸಿ ವಿದ್ಯುತ್ ಕಂಬಕ್ಕೆ ಕಟ್ಟಿ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕ್ರೌರ್ಯ ಮೆರೆಯಲಾಗಿತ್ತು. ಈ ಭೀಕರ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗುತ್ತಿದ್ದಂತೆ ದೇಶಾದ್ಯಂತ ತೀವ್ರ ಖಂಡನೆ ವ್ಯಕ್ತವಾಗಿತ್ತು.

ಈ ಘಟನೆಯ ನಂತರ ಪೊಲೀಸರು ಓಡಿಹೋಗಿದ್ದ ಪ್ರೇಮಿಗಳನ್ನು ಪತ್ತೆಹಚ್ಚಿ ಬೆಳಗಾವಿ ನಗರದ ದಕ್ಷಿಣ ಉಪನೋಂದಣಿ ಕಚೇರಿಯಲ್ಲಿ ಮದುವೆ ಮಾಡಿಸಿದರು. ದಂಪತಿ ಪ್ರಸ್ತುತ ನೆಮ್ಮದಿಯ ಜೀವನ ನಡೆಸುತ್ತಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿ ಓರ್ವ ಬಾಲಾಪರಾಧಿ ಸೇರಿ 13 ಮಂದಿ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲಾಗಿತ್ತು. ಇಂದು ಬೆಳಿಗ್ಗೆ ಬೆಳಗಾವಿ ಹಿಂಡಲಗಾ ಜೈಲಿನಿಂದ ಪೊಲೀಸ್ ವಾಹನಗಳಲ್ಲಿ ಆರೋಪಿಗಳನ್ನು ಜಿಲ್ಲಾ ನ್ಯಾಯಾಲಯಕ್ಕೆ ಕರೆತರಲಾಗಿತ್ತು. ಎರಡು ವರ್ಷಗಳ ವಿಚಾರಣೆಯ ಬಳಿಕ, ಬಾಲಾಪರಾಧಿಯನ್ನು ಹೊರತುಪಡಿಸಿ ಉಳಿದ 12 ಮಂದಿ ಆರೋಪಿಗಳು ತಪ್ಪಿತಸ್ಥರು ಎಂದು ನ್ಯಾಯಾಲಯ ತೀರ್ಪು ನೀಡಿದೆ.


Spread the love

About Laxminews 24x7

Check Also

ಬೆಳಗಾವಿ ನಗರದೊಳಗೆ ‘ಭಾರಿ’ ವಾಹನಗಳನ್ನ ನಿರ್ಬಂಧಿಸಿ: ರೈತ ಸಂಘ ಹಾಗೂ ಭ್ರಷ್ಟಾಚಾರ ನಿರ್ಮೂಲನಾ ಸಮಿತಿಯಿಂದ ಪ್ರತಿಭಟನೆ

Spread the loveಬೆಳಗಾವಿ ನಗರದ ಒಳಗಡೆ ಬರುವು ಭಾರಿ ಗಾತ್ರದ ವಾಹನಗಳನ್ನು ನಿಷೇಧಿಸುವಂತೆ ಆಗ್ರಹಿಸಿ ಸೋಮವಾರ ಕರ್ನಾಟಕ ರಾಜ್ಯ ರೈತ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ