Breaking News

ಹಲವೆಡೆ ವರುಣನ ಆರ್ಭಟ – ಮುಂದಿನ 3 ಗಂಟೆ ಭಾರೀ ಮಳೆ ಎಚ್ಚರಿಕೆ

Spread the love

ಬೆಂಗಳೂರು: ನಗರದ  ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಮಳೆಯಿಂದಾಗಿ ವಾಹನ ಸವಾರರು ಪರದಾಡಿದ್ದಾರೆ.

ಮಲ್ಲೇಶ್ವರ, ಪೀಣ್ಯ, ಜಾಲಹಳ್ಳಿ, ರಾಜಾಜಿನಗರ, ವಿಜಯನಗರ, ಯಶವಂತಪುರ ಸೇರಿದಂತೆ ಹಲವೆಡೆ ಮಳೆಯಾಗುತ್ತಿದೆ. ಮುಂದಿನ ಮೂರು ಗಂಟೆ ನಗರದಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಅಲ್ಲದೇ ನಗರದಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ತುಮಕೂರು, ಚಿಕ್ಕಬಳ್ಳಾಪುರ ಸೇರಿದಂತೆ ಬೆಂಗಳೂರು ಸುತ್ತಮುತ್ತಲು ಭಾರಿ ಮಳೆ ಮುನ್ಸೂಚನೆ ನೀಡಲಾಗಿದೆ. ಇದರ ಜೊತೆಗೆ ವಿಜಯನಗರ, ಬಳ್ಳಾರಿ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ನೀಡಲಾಗಿದೆ.

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಬೆಂ.ದಕ್ಷಿಣ, ಮಂಡ್ಯ, ಮೈಸೂರು, ಚಾಮರಾಜನಗರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ಚಿತ್ರದುರ್ಗ, ದಾವಣಗೆರೆ, ಬಳ್ಳಾರಿ, ಬಾಗಲಕೋಟೆ ಮತ್ತು ಬೆಳಗಾವಿ ಸೇರಿ ಉತ್ತರ ಕರ್ನಾಟಕದ ಭಾಗಗಳಲ್ಲಿ ಜೂ.13ರಿಂದ ಜೂ.15ರ ವರೆಗೆ ಹಗುರ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.


Spread the love

About Laxminews 24x7

Check Also

ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್ ನೇಮಕ

Spread the loveನವದೆಹಲಿ: ಭಾರತದ ಮುಂದಿನ ಸೇನಾ ಮುಖ್ಯಸ್ಥರಾಗಿ ಲೆಫ್ಟಿನೆಂಟ್ ಜನರಲ್ ಧೀರಜ್ ಸೇಠ್  ಅವರನ್ನ ಕೇಂದ್ರ ಸರ್ಕಾರ ನೇಮಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ