Breaking News

ವಿಜಯಪುರ: ನೇಣು ಬಿಗಿದುಕೊಂಡು ಮಹಿಳಾ ವಿವಿ ವಿದ್ಯಾರ್ಥಿನಿ ಆತ್ಮಹತ್ಯೆ

Spread the love

ವಿಜಯಪುರ : ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಬೇಕಿದ್ದ ವಿದ್ಯಾರ್ಥಿನಿ ವಿಜಯಪುರದ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯ ಆವರಣದ ವಿದ್ಯಾರ್ಥಿನಿಯರ ವಸತಿ ನಿಲಯದಲ್ಲಿ ಭಾನುವಾರ ನೇಣು ಬಿಗಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಮೂಲತಃ ಕಲಬುರಗಿ ನಗರದ ಐಶ್ವರ್ಯ ಶಂಕರ ನಾಟಿಕಾರ (24) ಎಂಬ ವಿದ್ಯಾರ್ಥಿನಿಯೇ ಆತ್ಮಹತ್ಯೆಗೆ ಶರಣಾದ ದುರ್ದೈವಿಯಾಗಿದ್ದಾಳೆ.

ತಂಗಿ ಆತ್ಮಹತ್ಯೆಗೆ ಕಾರಣವೆಂದು ಭಾವನನ್ನೇ ಹತ್ಯೆಗೈದ ಯೋಧ

ವಿದ್ಯಾರ್ಥಿನಿ ಸಾವಿಗೆ ನಿಖರ ಕಾರಣ ತಿಳಿದುಬಂದಿಲ್ಲ. ಪೊಲೀಸರ ತನಿಖೆಯಿಂದ ಸಾವಿನ ನಿಖರ ಕಾರಣ ತಿಳಿದು ಬರಲಿದೆ. ಈಚೆಗಷ್ಟೇ ಈ ವಿದ್ಯಾರ್ಥಿನಿಗೆ ಮದುವೆಯ ನಿಶ್ಚಿತಾರ್ಥವಾಗಿತ್ತು. ಅಲ್ಲದೆ ಸೋಮವಾರ ಎಂಕಾಂ ಅಂತಿಮ ವರ್ಷದ ಕೊನೆಯ ಪರೀಕ್ಷೆ ಬರೆಯಲಿದ್ದಳು.

ಈ ಕುರಿತು ವಿಜಯಪುರ ಗ್ರಾಮೀಣ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


Spread the love

About Laxminews 24x7

Check Also

ಜರುಗಿದ ಚಳಿಗಾಲ ಆಧಿವೇಶನ ಪೂರ್ವ ಸಿದ್ಧತಾ ಸಭೆ

Spread the love ಬೆಳಗಾವಿಯಲ್ಲಿ ಡಿ.8ರಿಂದ ನಡೆಯಲಿರುವ ವಿಧಾನಮಂಡಳ ಚಳಿಗಾಲ ಅಧಿವೇಶನಕ್ಕೆ ಸಂಬಂಧಿಸಿದಂತೆ ರಚಿಸಲಾಗಿರುವ ವಿವಿಧ ಸಮಿತಿ ಹಾಗೂ ಉಪ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ