ವಿಜಯಪುರ: ಸಾಲಬಾಧೆ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಇಂಡಿ ತಾಲೂಕಿನ ಅಂಜುಟಗಿ ಗ್ರಾಮದಲ್ಲಿ ನಡೆದಿದೆ. ಪುಂಡಲೀಕ ಹಂಜಗಿ(23) ನೇಣುಬಿಗಿದುಕೊಂಡ ಯುವಕ.
ಅನಾರೋಗ್ಯ ಪೀಡಿತ ತಾಯಿಗೆ ಚಿಕಿತ್ಸೆ ಕೊಡಿಸಲು ಪುಂಡಲೀಕ ಸಾಲಮಾಡಿದ್ದ. ಸಾಲ ಮರುಪಾವತಿಸಲು ಸಾಧ್ಯವಾಗದ ಕಾರಣ ಮನನೊಂದು ನೇಣಿಗೆ ಶರಣಾಗಿದ್ದಾನೆ. ಈತ ಯುವ ರೈತನೂ ಆಗಿದ್ದ. ಆದರೆ ತಪ್ಪು ನಿರ್ಧಾರದಿಂದ ತಮ್ಮವರನ್ನು ಬಿಟ್ಟು ಹೊರಟಿದ್ದಾನೆ. ಝಳಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
Laxmi News 24×7