ಬೆಳಗಾವಿ: ಮಹಾನಗರ ಪಾಲಿಕೆಯ ಮೇಯರ್, ಉಪಮೇಯರ್ ಚುನಾವಣೆಯಲ್ಲಿ ಮಹಾಪೌರ ಸ್ಥಾನಕ್ಕೆ ವೀರಶೈವ ಲಿಂಗಾಯತ ಸಮುದಾಯಕ್ಕೆ ಆದ್ಯತೆ ನೀಡಬೇಕು ಎಂದು ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭೆ ಜಿಲ್ಲಾ ಅಧ್ಯಕ್ಷೆ ರತ್ನಪ್ರಭಾ ಬೆಲ್ಲದ ಒತ್ತಾಯಿಸಿದ್ದಾರೆ.
ಮೇಯರ್ ಹುದ್ದೆ ಸಾಮಾನ್ಯ ಮಹಿಳೆ, ಉಪ ಮೇಯರ್ ಸಾಮಾನ್ಯ ವರ್ಗಕ್ಕೆ ಸೇರಿದ್ದು, ಇಂತಹ ಸಂದರ್ಭದಲ್ಲಿ ವೀರಶೈವ ಲಿಂಗಾಯತ ಸಮುದಾಯದ ಅಭ್ಯರ್ಥಿಯನ್ನು ಕಡೆಗಣಿಸುತ್ತಿರುವುದು ಸರಿಯಲ್ಲ. ಯಾವುದೇ ಪಕ್ಷ ಅಧಿಕಾರದಲ್ಲಿದ್ದರೂ ವೀರಶೈವ ಲಿಂಗಾಯತ ಸಮುದಾಯದ ಕೊಡುಗೆ ಬಹು ಮುಖ್ಯ. ಈ ಸಮುದಾಯವನ್ನು ಕಡೆಗಣಿಸದೆ ಮೇಯರ್ ಹುದ್ದೆಗೆ ಪರಿಗಣಿಸಬೇಕೆಂದು ಪ್ರಕರಣೆ ಮೂಲಕ ಆಗ್ರಹಿಸಿದ್ದಾರೆ.
Laxmi News 24×7