Breaking News

ಸೆ.21ರಿಂದ ಮೂರು ದಿನಗಳ ಕಾಲ ವಿಶೇಷ ಅಧಿವೇಶನ

Spread the love

ಬೆಂಗಳೂರು: ಸೆ.21ರಿಂದ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ  ನಡೆಸಲು ಸಚಿವ ಸಂಪುಟದಲ್ಲಿ ಒಪ್ಪಿಗೆ ನೀಡಲಾಗಿದೆ.

ಸಿಎಂ ಡಿಕೆ ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ವಿಶೇಷ ಅಧಿವೇಶನಕ್ಕೆ ಒಪ್ಪಿಗೆ ನೀಡಲಾಗಿದೆ. ಸೆಪ್ಟೆಂಬರ್ 21ರಿಂದ ಸೆಪ್ಟೆಂಬರ್ 23ರವರೆಗೆ ಒಟ್ಟು ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದೆ.

ಈ ಮೊದಲು ಮಹರ್ಷಿ ವಾಲ್ಮೀಕಿ ಅಭಿವೃದ್ಧಿ ನಿಗಮದ ಹಣ ದುರ್ಬಳಕೆ ಪ್ರಕರಣದಲ್ಲಿ ಸಚಿವ ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ ಹೋರಾಟ ಮುಂದುವರೆಸಿತ್ತು. ಅಲ್ಲದೇ ಅಹೋರಾತ್ರಿ ಧರಣಿಗೂ ಸಿದ್ಧತೆ ನಡೆಸಿತ್ತು. ಈ ಮಧ್ಯೆಯೇ ಮೂರು ದಿನ ಮೊದಲೇ ವಿಧಾನಮಂಡಲದ ಕಲಾಪ ಅನಿರ್ದಿಷ್ಟಾವಧಿಗೆ ಮುಂದೂಡಿಕೆ ಮಾಡಲಾಗಿತ್ತು. ಇದೀಗ ಮತ್ತೆ ಮೂರು ದಿನಗಳ ಕಾಲ ವಿಶೇಷ ಅಧಿವೇಶನ ನಡೆಯಲಿದ್ದು, ಕಸ್ತೂರಿ ರಂಗನ್ ವರದಿ ಹಾಗೂ ಬರದ ಬಗ್ಗೆ ಚರ್ಚೆ ನಡೆಯಲಿದೆ.


Spread the love

About Laxminews 24x7

Check Also

ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಪ್ರಕರಣ – ಶಾಸಕ ಸುರೇಶ್‌ಗೌಡ ಪುತ್ರಿ ನಿರೀಕ್ಷಣಾ ಜಾಮೀನು ಅರ್ಜಿ ವಜಾ

Spread the loveಮಂಡ್ಯ: ಕರ್ತವ್ಯನಿರತ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ, ಶಾಸಕ ಸುರೇಶ್‌ಗೌಡ ಅವರ ಪುತ್ರಿ ಐಶ್ವರ್ಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ