Breaking News
Home / ಜಿಲ್ಲೆ / ಬೆಳಗಾವಿ / ಅಥಣಿ / ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ

Spread the love

ಬೆಂಗಳೂರು, ಫೆ.17- ವಿಧಾನಸಭೆಯಿಂದ ವಿಧಾನಪರಿಷತ್‍ಗೆ ಇಂದುನಡೆದ ಒಂದು ಸ್ಥಾನದ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಉಪಮುಖ್ಯಮಂತ್ರಿ ಲಕ್ಷ್ಮಣ್ ಸವದಿ ಆಯ್ಕೆಯಾಗುವುದು ಬಹುತೇಕ ಖಚಿತವಾಗಿದೆ. ಪಕ್ಷೇತರ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದ ಅನಿಲ್‍ಕುಮಾರ್ ಈಗಾಗಲೇ ಸ್ಪರ್ಧೆಯಿಂದ ನಿವೃತ್ತಿಯಾಗುವುದಾಗಿ ಘೋಷಿಸಿದ್ದರು. ಹೀಗಾಗಿ ಇಂದು ಕೇವಲ ನಾಮಕಾವಸ್ಥೆಗೆ ಚುನಾವಣೆ ನಡೆದಿದ್ದು, ಲಕ್ಷ್ಮಣ್ ಸವದಿ ಬಹುತೇಕ ಆಯ್ಕೆಯಾಗುವುದು ನೂರಕ್ಕೆ ನೂರರಷ್ಟು ಖಚಿತವಾಗಿದೆ.

ಬೆಳಗ್ಗೆ 8.30ಕ್ಕೆ ವಿಧಾನಸೌಧದ ಮೊದಲ ಮಹಡಿಯ ಕೊಠಡಿ 106 ರಲ್ಲಿ ನಡೆದ ಮತದಾನದಲ್ಲಿಬಿಜೆಪಿಯ ಎಲ್ಲಾ ಸಚಿವರು, ಶಾಸಕರು ಸೇರಿದಂತೆ ಒಟ್ಟು 117 ಮಂದಿ ಜೊತೆಗೆ ಪಕ್ಷೇತರ ಶಾಸಕರಾದ ಅಬಕಾರಿ ಸಚಿವ ಎಚ್.ನಾಗೇಶ್ ಮತ್ತು ಬಿಎಸ್‍ಪಿಯ ಎನ್.ಮಹೇಶ್ ಕೂಡ ಲಕ್ಷ್ಮಣ್ ಸವದಿ ಪರ ಮತ ಚಲಾಯಿಸಿದ್ದಾರೆ ಎನ್ನಲಾಗಿದೆ.

ಮತದಾನ ಆರಂಭಗೊಂಡ ತಕ್ಷಣ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ,ಉಪಮುಖ್ಯಮಂತ್ರಿಗಳಾದ ಗೋವಿಂದ ಕಾರಜೋಳ, ಸಿ.ಎನ್.ಅಶ್ವತ್‍ನಾರಾಯಣ, ಲಕ್ಷ್ಮಣ್ ಸವದಿ, ಸಚಿವರಾದ ಬಸವರಾಜ ಬೊಮ್ಮಾಯಿ, ಮಾಧುಸ್ವಾಮಿ, ವಿ.ಸೋಮಣ್ಣ, ಆರ್.ಅಶೋಕ್ ಸೇರಿದಂತೆ ಶಾಸಕರೆಲ್ಲರೂ ಸರತಿ ಸಾಲಿನಲ್ಲಿ ನಿಂತು ಮತ ಚಲಾಯಿಸಿದರು.

ಸಂಜೆ 4 ಗಂಟೆಯವರೆಗೂ ಮತದಾನ ನಡೆಯಲಿದ್ದು, 5 ಗಂಟೆ ನಂತರ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಗೊಳ್ಳಲಿದೆ. ಸ್ಪರ್ಧಾ ಕಣದಲ್ಲಿ ಲಕ್ಷ್ಮಣ್ ಸವದಿ ಒಬ್ಬರೇ ಇದ್ದ ಕಾರಣ ಅವರೂ ಕೂಡ ತುಸು ನಿರಾಳರಾದಂತೆ ಕಂಡುಬಂದರು.ಇನ್ನು ಪಕ್ಷೇತರ ಅಭ್ಯರ್ಥಿ ಅನಿಲ್‍ಕುಮಾರ್ ನಿವೃತ್ತಿಯಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತು ಜೆಡಿಎಸ್‍ನ ಯಾವುದೇ ಶಾಸಕರು ಮತ ಚಲಾಯಿಸುವ ಗೊಡವೆಗೆ ಹೋಗಲಿಲ್ಲ. ಬಹುತೇಕ ಎಲ್ಲಾ ಶಾಸಕರು ಮತದಾನದಿಂದ ದೂರ ಉಳಿದಿದ್ದರು.

ಕಾಂಗ್ರೆಸ್‍ನ ರಿಜ್ವಾನ್ ಅರ್ಷದ್ ಅವರು ಶಾಸಕರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ವಿಧಾನಪರಿಷತ್ ಸ್ಥಾನಕ್ಕೆ ರಾಜೀನಾಮೆ ನೀಡಿದ್ದರು. ತೆರವಾದ ಈ ಸ್ಥಾನಕ್ಕೆ ಬಿಜೆಪಿಯಿಂದ ಲಕ್ಷ್ಮಣ್ ಸವದಿ ಕಣಕ್ಕಿಳಿದಿದ್ದರು. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಅಥಣಿ ಕ್ಷೇತ್ರದಿಂದ ಸ್ಪರ್ಧಿಸಿ ಅವರು ಪರಾಭವಗೊಂಡಿದ್ದರು.

ಸಮ್ಮಿಶ್ರ ಸರ್ಕಾರ ಪತನಗೊಂಡು ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ನಂತರ ಅಚ್ಚರಿ ಬೆಳವಣಿಗೆ ಎಂಬಂತೆ ಲಕ್ಷ್ಮಣ್ ಸವದಿ ಸಂಪುಟಕ್ಕೆ ಸೇರ್ಪಡೆಯಾಗಿ ಉಪಮುಖ್ಯಮಂತ್ರಿಯೂ ಆಗಿದ್ದರು. ನಿಯಮಗಳ ಪ್ರಕಾರ ವಿಧಾನಮಂಡಲದ ಉಭಯ ಸದನಗಳಾದ ವಿಧಾನಸಭೆ ಇಲ್ಲವೆ, ವಿಧಾನಪರಿಷತ್‍ಗೆ ಆರು ತಿಂಗಳೊಳಗೆ ಯಾವುದಾದರೂ ಒಂದು ಸದನದಿಂದ ಆಯ್ಕೆಯಾಗಲೇಬೇಕು.

ಇಲ್ಲದಿದ್ದರೆ ಅವರು ಸ್ಥಾನವನ್ನು ಕಳೆದುಕೊಳ್ಳಬೇಕಾಗುತ್ತದೆ. ಲಕ್ಷ್ಮಣ್ ಸವದಿ ಇದೇ ತಿಂಗಳ ಅಂತ್ಯದೊಳಗೆ ಆಯ್ಕೆಯಾಗಬೇಕಿತ್ತು. ಇದೀಗ ವಿಧಾನಪರಿಷತ್‍ನಿಂದ ಆಯ್ಕೆಯಾಗಿರುವ ಕಾರಣ ಅವರ ಸ್ಥಾನಕ್ಕೆ ಎದುರಾಗಿದ್ದ ಎಲ್ಲಾ ಆಪತ್ತುಗಳು ನಿವಾರಣೆಯಾಗಿವೆ.


Spread the love

About Laxminews 24x7

Check Also

ಬಹುಭಾಷಾ ನಟ ಪ್ರಕಾಶ್ ರೈ ಮತ ಚಲಾಯಿಸಿದ್ದು ಯಾರಿಗೆ ಗೊತ್ತಾ?

Spread the love ಲೋಕಸಭೆ ಚುನಾವಣೆ 2024 ರ ಎರಡನೇ ಹಂತದಲ್ಲಿ ಇಂದು ಶುಕ್ರವಾರ (ಏಪ್ರಿಲ್ 26) ಆರಂಭವಾಗಿದೆ. 13 …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ