ಬೆಂಗಳೂರು: ಇಂದಿನಿಂದ ವಿಧಾನಮಂಡಲ ಜಂಟಿ ಅಧಿವೇಶನ ಆರಂಭವಾಗಿದ್ದು, ಈ ಹಿನ್ನಲೆಯಲ್ಲಿ ವಿಧಾನಸೌಧದ ಸುತ್ತಮುತ್ತ ಮೂರು ದಿನಗಳ ಕಾಲ ನಿಷೇಧಾಜ್ಞೆ ಜಾರಿ ಮಾಡಲಾಗಿದೆ ಎಂದು ಬೆಂಗಳೂರು ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ತಿಳಿಸಿದ್ದಾರೆ.
ವಿಧಾನಸೌಧದಲ್ಲಿ ಇಂದಿನಿಂದ ಮೂರು ದಿನಗಳ ಕಾಲ ಅಧಿವೇಶನ ನಡೆಯಲಿದ್ದು, ಕೆಲ ಸಂಘಟನೆಗಳು ಅಧಿವೇಶನ ಸಮಯದಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಹಾಕುವ ಸಾಧ್ಯತೆಗಳಿವೆ ಎಂದು ಗುಪ್ತಚರ ಇಲಾಖೆ ಮತ್ತು ಪೊಲೀಸ್ ಮೂಲಗಳು ತಿಳಿಸಿವೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ವಿಧಾನಸೌಧದ ಸುತ್ತಮುತ್ತಲಿನ 2 ಕಿ.ಮೀವರೆಗೂ ನಿಷೇಧ ಜಾರಿಗೊಳಿಸಲಾಗಿದೆ.
ಜನವರಿ 20ರ ರಾತ್ರಿ 12 ಗಂಟೆವರೆಗೂ ನಿಷೇಧಾಜ್ಞೆ ಜಾರಿಯಲ್ಲಿರಲಿದೆ. ಸಿಎಎ ವಿರೋಧಿ ಪ್ರತಿಭಾಟನೆ, ಕಳಸ ಬಂಡೂರಿ ಯೋಜನೆ, ಸರೋಜಿನಿ ಮಹಿಷಿ ವರದಿ ಜಾರಿ, ಆಶಾ ಕಾರ್ಯಕರ್ತರ ಬೇಡಿಕೆ ಈಡೇರಿಕೆ ಸೇರಿದಂತೆ ವಿವಿಧ ಸಂಘಟನೆಗಳು ಈಗಾಗಲೇ ಪ್ರತಿಭಾಟನೆ ನಡೆಸಿದ್ದು, ಅಧಿವೇಶನ ವೇಳೆ ವಿಧಾನಸೌಧಕ್ಕೆ ಮುತ್ತಿಗೆ ಹಾಕಾಲು ಮುಂದಾಗುವ ಸಾಧ್ಯತೆ ಇರುವುದರಿಂದ ಈ ಕ್ರಮ ಕೈಗೊಳ್ಳಲಾಗಿದೆ.