Breaking News

ವಿದ್ಯುತ್ ಚಿತಾಗಾರ ನಿರ್ಮಾಣಕ್ಕೆ ಪೌರಾಯುಕ್ತರಿಗೆ ಮನವಿ

Spread the love

ಚಾಮರಾಜನಗರ: ಜಿಲ್ಲಾ ಕೇಂದ್ರದಲ್ಲಿ ವಿದ್ಯುತ್ ಚಿತಾಗಾರ ನಿರ್ಮಾಣ ಮಾಡುವಂತೆ ಒತ್ತಾಯಿಸಿ ಮುಖಂಡ ವಿಜಯ ಕುಮಾರ್ ಜಟ್ಟಪ್ಪ ನೇತೃತ್ವದಲ್ಲಿ ನಗರಸಭೆ ಕಚೇರಿಯಲ್ಲಿ ಪೌರಾಯುಕ್ತ ಪರಶುರಾಮ ಛಲವಾದಿ ಅವರಿಗೆ ಮನವಿ ಸಲ್ಲಿಸಲಾಯಿತು.

2020-21ರಿಂದಲೂ ಚಾಮರಾಜನಗರದಲ್ಲಿ ಸುಸಜ್ಜಿತ ವಿದ್ಯುತ್ ಚಾಲಿತ ಚಿತಾಗಾರ ನಿರ್ಮಾಣಕ್ಕೆ ಹೋರಾಟ ಮಾಡಲು ಒತ್ತಾಯ ಮಾಡಿಕೊಂಡು ಬಂದಿದ್ದೇವೆ.

ಜಿಲ್ಲೆಯ ಶಾಸಕರು, ಸಂಸದರು, ಉಸ್ತುವಾರಿ ಸಚಿವರು, ಮುಖ್ಯಮಂತ್ರಿ, ಜಿಲ್ಲಾಧಿಕಾರಿ ಸಹಿತ ಎಲ್ಲರಿಗೂ ಮನವಿ ಸಲ್ಲಿಸಿದ್ದರೂ ಪ್ರಯೋಜನವಾಗಿಲ್ಲ.

2024-25ನೇ ಸಾಲಿನ ಬಜೆಟ್‌ನಲ್ಲಿ ಅಂದಿನ ಆಡಳಿತಾಧಿಕಾರಿಗಳು ವಿದ್ಯುತ್ ಚಾಲಿತ ಚಿತಾಗಾರಕ್ಕೆ ₹ 2.50 ಕೋಟಿ ಮೀಸಲು ಇಟ್ಟಿದ್ದರೂ ಬಳಕೆಯಾಗಿಲ್ಲ. 2026-27ನೇ ಸಾಲಿನ ಆಯವ್ಯಯದಲ್ಲಿ ವಿದ್ಯುತ್ ಚಾಲಿತ ಚಿತಾಗಾರದ ಕಾಮಗಾರಿ ಆರಂಭಿಸಬೇಕು ಎಂದು ಮನವಿಯಲ್ಲಿ ಒತ್ತಾಯಿಸಿದ್ದಾರೆ.

ಈ ಸಂದರ್ಭ ಮುಖಂಡರಾದ ವೇಲುಮಣಿ, ಮಹದೇವಪ್ಪ, ರಂಗಸ್ವಾಮಿ ನಾಯಕ, ಅಮಚವಾಡಿ ಶಿವಣ್ಣ ಇದ್ದರು.


Spread the love

About Laxminews 24x7

Check Also

5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ ರಜೆ ನೀಡಿ ಪಿಸಿಸಿಎಫ್ ಆದೇಶಿಸಿದ್ದಾರೆ.

Spread the loveಚಾಮರಾಜನಗರ: ಮಲೆಮಹದೇಶ್ವರ ವನ್ಯಜೀವಿಧಾಮದ ಮೀಣ್ಯಂ ಅರಣ್ಯದಲ್ಲಿ 5 ಹುಲಿಗಳು ಮೃತಪಟ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಅರಣ್ಯಾಧಿಕಾರಿಗಳಿಗೆ ಕಡ್ಡಾಯ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ