Breaking News

ವಿಜಯ್ – ತ್ರಿಷಾ ಮದುವೆಯಾಗಬೇಕು: ರಾಖಿ ಸಾವಂತ್

Spread the love

ದಳಪತಿ ವಿಜಯ್  ಮತ್ತು ನಟಿ ತ್ರಿಷಾ  ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳ ನಡುವೆ ನಟಿ ರಾಖಿ ಸಾವಂತ್ , ಅವರಿಬ್ಬರು ಮದುವೆಯಾಗಬೇಕು ಎಂದು ಹೇಳುವ ಮೂಲಕ ಹೊಸ ಸಂಚಲನ ಸೃಷ್ಟಿಸಿದ್ದಾರೆ.

ತಮಿಳುನಾಡು ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ದಾಖಲಿಸಿ ರಾಜಕೀಯ ಅಖಾಡದಲ್ಲಿ ಮಿಂಚುತ್ತಿರುವ ದಳಪತಿ ವಿಜಯ್, ಇದೀಗ ತಮ್ಮ ವೈಯಕ್ತಿಕ ಜೀವನದ ಕಾರಣಕ್ಕೆ ಸುದ್ದಿಯಲ್ಲಿದ್ದಾರೆ. ಕಳೆದ ಕೆಲವು ಸಮಯದಿಂದ ನಟಿ ತ್ರಿಷಾ ಮತ್ತು ವಿಜಯ್ ಡೇಟಿಂಗ್ ಮಾಡುತ್ತಿದ್ದಾರೆ ಎಂಬ ವದಂತಿಗಳು ಹರಿದಾಡುತ್ತಿವೆ. ಈ ಬೆನ್ನಲ್ಲೇ ಬಾಲಿವುಡ್‌ನ ವಿವಾದಾತ್ಮಕ ನಟಿ ರಾಖಿ ಸಾವಂತ್ ನೀಡಿರುವ ಹೇಳಿಕೆ ಈಗ ಹೊಸ ಸಂಚಲನ ಸೃಷ್ಟಿಸಿದೆ.

ಇತ್ತೀಚಿನ ಸಂದರ್ಶನವೊಂದರಲ್ಲಿ ಈ ಕುರಿತು ಮಾತನಾಡಿರುವ ರಾಖಿ ಸಾವಂತ್, ವಿಜಯ್ ಮತ್ತು ತ್ರಿಷಾ ಜೋಡಿ ಅದ್ಭುತವಾಗಿದೆ. ಅವರಿಬ್ಬರೂ ಈಗಲೇ ಮದುವೆಯಾಗಬೇಕು. ಅವರ ಮೆಹಂದಿ ಕಾರ್ಯಕ್ರಮಕ್ಕೆ ನಾವೆಲ್ಲರೂ ಹೋಗೋಣ ಎಂದು ಹೇಳಿದ್ದಾರೆ.

ತ್ರಿಷಾ ಜೊತೆಗಿನ ಅವರ ಸ್ನೇಹದ ಬಗ್ಗೆ ಮಾತನಾಡಿದ ಅವರು, ನಾನು ಮತ್ತು ತ್ರಿಷಾ ಚಿತ್ರರಂಗದಲ್ಲಿ ಒಟ್ಟಿಗೆ ವೃತ್ತಿಜೀವನ ಆರಂಭಿಸಿದವರು, ಹಾಗಾಗಿ ಅವರು ನನಗೆ ಚೆನ್ನಾಗಿ ಗೊತ್ತು ಎಂದು ನಟಿ ಹೇಳಿಕೊಂಡಿದ್ದಾರೆ.

ವಿಜಯ್ ನೇತೃತ್ವದ ಟಿವಿಕೆ ಪಕ್ಷವು ಚುನಾವಣೆಯಲ್ಲಿ ಗೆಲುವು ಸಾಧಿಸುತ್ತಿದ್ದಂತೆ, ಸೋಶಿಯಲ್ ಮೀಡಿಯಾದಲ್ಲಿ ವಿಜಯ್ ಮತ್ತು ತ್ರಿಷಾ ಒಟ್ಟಿಗೆ ಇರುವ ಹಳೆಯ ವಿಡಿಯೋಗಳು ಮತ್ತು ಫೋಟೋಗಳು ಮತ್ತೆ ಮುನ್ನೆಲೆಗೆ ಬಂದಿವೆ. ‘ಗಿಲ್ಲಿ’ಯಂತಹ ಸೂಪರ್ ಹಿಟ್ ಸಿನಿಮಾಗಳಲ್ಲಿ ಒಂದಾಗಿ ನಟಿಸಿದ್ದ ಈ ಜೋಡಿ ನಿಜ ಜೀವನದಲ್ಲೂ ಒಂದಾಗಲಿದೆಯೇ ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆಮಾಡಿದೆ. ಸದ್ಯಕ್ಕೆ ದಳಪತಿ ವಿಜಯ್ ಕಡೆಯಿಂದ ಈ ಡೇಟಿಂಗ್ ಅಥವಾ ಮದುವೆಯ ಸುದ್ದಿಗೆ ಯಾವುದೇ ಅಧಿಕೃತ ಸ್ಪಷ್ಟನೆ ಸಿಕ್ಕಿಲ್ಲ. ಆದರೂ, ರಾಖಿ ಸಾವಂತ್ ಅವರ ಮಾತುಗಳು ಮಾತ್ರ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.


Spread the love

About Laxminews 24x7

Check Also

ಬರಪೀಡಿತ ಎಂದು ಘೋಷಿಸದ್ದಕ್ಕೆ ರಾಜೀನಾಮೆ ಸಲ್ಲಿಸಿದೆ – ಕ್ಷೇತ್ರದ ಜನರಿಗಾಗಿ ರಾಜಕೀಯ ನಿವೃತ್ತಿಗೂ ಸಿದ್ಧ: ಯಶವಂತರಾಯಗೌಡ

Spread the loveವಿಜಂಯಪುರ: 188 ತಾಲೂಕುಗಳು ಘೋಷಣೆ ಆದಾಗಲೂ, ವಿಜಯಪುರ ಜಿಲ್ಲೆಯ 13 ತಾಲೂಕುಗಳ ಪೈಕಿ 11 ಘೋಷಣೆ ಆದರೂ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ