ಚೆನ್ನೈ: ಸಿಜೆಪಿ , ಎಡಪಂಥೀಯ ಪ್ರತಿಭಟನೆಗಳಿಂದ ವಿದ್ಯಾರ್ಥಿಗಳನ್ನು ದೂರವಿಡುವಂತೆ ಅಧಿಕಾರಿಗಳಿಗೆ ಸೂಚಿಸಿರುವ ಆದೇಶವನ್ನು ತಮಿಳುನಾಡು ಸರ್ಕಾರ ರದ್ದುಗೊಳಿಸಿದೆ.
ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳು ಮತ್ತು ಯುವಕರು ಪ್ರತಿಭಟನೆಗಳು, ಆಂದೋಲನಗಳಲ್ಲಿ ಭಾಗವಹಿಸುವುದನ್ನು ತಡೆಯಲು ಕ್ರಮ ಕೈಗೊಳ್ಳುವ ತನ್ನ ಹಿಂದಿನ ನಿರ್ದೇಶನವನ್ನು ಸರ್ಕಾರ ಹಿಂತೆಗೆದುಕೊಂಡಿದೆ.
ಈ ವಿಷಯಕ್ಕೆ ಸಂಬಂಧಿಸಿದಂತೆ ಆಗಸ್ಟ್ 17 ರಂದು ಇಲಾಖೆ ನೀಡಿದ್ದ ಹಿಂದಿನ ನಿರ್ದೇಶನವನ್ನು ಹಿಂಪಡೆಯಲಾಗಿದೆ ಎಂದು ಕಾಲೇಜು ಶಿಕ್ಷಣದ ಜಂಟಿ ನಿರ್ದೇಶಕಿ ಸಿಂಥಿಯಾ ಸೆಲ್ವಿ ಪಿ ತಿಳಿಸಿದ್ದಾರೆ. ತಮಿಳುನಾಡಿನಾದ್ಯಂತ ಎಲ್ಲಾ ಸರ್ಕಾರಿ ಕಲಾ ಮತ್ತು ವಿಜ್ಞಾನ ಕಾಲೇಜುಗಳ ಪ್ರಾಂಶುಪಾಲರಿಗೆ ಈ ಆದೇಶ ನೀಡಲಾಗಿತ್ತು.
ಎಡಪಕ್ಷಗಳು ಮತ್ತು ತಮಿಳುನಾಡು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಆಯೋಜಿಸುವ ಪ್ರತಿಭಟನೆಗಳಲ್ಲಿ ಶಾಲಾ ಮತ್ತು ಕಾಲೇಜು ವಿದ್ಯಾರ್ಥಿಗಳು ಹಾಗೂ ಯುವಕರು ಭಾಗವಹಿಸದಂತೆ ನೋಡಿಕೊಳ್ಳಲು ಕ್ರಮಗಳನ್ನು ತೆಗೆದುಕೊಳ್ಳುವಂತೆ ಈ ಹಿಂದೆ ಶಿಕ್ಷಣ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿತ್ತು.
ಶಾಲಾ ಶಿಕ್ಷಣ ಇಲಾಖೆ, ಉನ್ನತ ಶಿಕ್ಷಣ ಇಲಾಖೆ, ಪೊಲೀಸ್ ಇಲಾಖೆ, ಜಿಲ್ಲಾಡಳಿತಗಳು ಜಂಟಿಯಾಗಿ ಕಾರ್ಯನಿರ್ವಹಿಸಿ ವಿದ್ಯಾರ್ಥಿಗಳು ಯಾವುದೇ ರಾಜಕೀಯ ಪಕ್ಷಗಳ ಪ್ರತಿಭಟನೆಯಲ್ಲಿ ಪಾಲ್ಗೊಳ್ಳದಂತೆ ನೋಡಿಕೊಳ್ಳಲು ತಿಳಿಸಲಾಗಿತ್ತು.
Laxmi News 24×7