Breaking News

ವಿಜಯಪುರದಲ್ಲಿ ಗೃಹ ಬಳಕೆಯ ಅನಿಲ ಅಭಾವ

Spread the love

ವಿಜಯಪುರ ಜಿಲ್ಲೆಯಲ್ಲಿ ಗೃಹ ಬಳಕೆಯ ಅನಿಲ ಕೊರತೆ ಸಮಸ್ಯೆ ಮುಂದುವರೆ ದಿದ್ದು, ಜನರು ಸಂಕಷ್ಟಕ್ಕೆ ಒಳಗಾಗಿದ್ದಾರೆ. ಯುದ್ಧ ಪರಿಸ್ಥಿತಿಯ ಪರಿಣಾಮವಾಗಿ ಅನಿಲ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಿದ್ದು, ವಿಜಯಪುರದಲ್ಲಿ ಭಾರತ್ ಗ್ಯಾಸ್ ಮತ್ತು ಇಂಡೇನ್ ಗ್ಯಾಸ್ ಏಜೆನ್ಸಿಗಳ ಬಳಿ ಭಾರೀ ಜನಸಂದಣಿ ಕಂಡುಬಂದಿದೆ. ನಗರದ ಸ್ಟೇಷನ್ ರಸ್ತೆಯ ಸಮೀಪ ಇರುವ ಗ್ಯಾಸ್ ಏಜೆನ್ಸಿಗಳ ಮುಂದೆ ಬೆಳಗ್ಗಿನಿಂದಲೇ ಜನರು ಸಾಲಿನಲ್ಲಿ ನಿಂತಿರುವುದು ಕಂಡುಬಂದಿದೆ.

ಬಹುತೇಕ ಭಾರತ್ ಗ್ಯಾಸ್ ಏಜೆನ್ಸಿಗಳಲ್ಲಿ “ಸ್ಟಾಕ್ ಇಲ್ಲ” ಎಂಬ ಫಲಕ ಅಳವಡಿಸಿರುವುದು ಗ್ರಾಹಕರ ಅಸಮಾಧಾನಕ್ಕೆ ಕಾರಣವಾಗಿದೆ. ಗೃಹ ಬಳಕೆಯ ಅನಿಲ ಸಿಗದೇ ಮಹಿಳೆಯರು ಹಾಗೂ ಕುಟುಂಬಗಳು ತೊಂದರೆ ಅನುಭವಿಸುತ್ತಿದ್ದು, ಸಂಬಂಧಿತ ಅಧಿಕಾರಿಗಳು ತಕ್ಷಣ ಕ್ರಮ ಕೈಗೊಂಡು ಸರಬರಾಜು ಸುಧಾರಿಸಬೇಕೆಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.


Spread the love

About Laxminews 24x7

Check Also

ಬೇಸಿಗೆ ಹಿನ್ನೆಲೆ, ಏರುತ್ತಿದೆ ತಾಪಮಾನ; ಈಜುಕೊಳದತ್ತ ಮುಖ ಮಾಡಿದ ವಿಜಯಪುರದ ಜನರು…

Spread the loveಈ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾಗುತ್ತಿದ್ದು, ಬಿಸಿಲಿನ ತಾಪ ತಣಿಸಿಕೊಳ್ಳಲು ಜನರು ಈಜುಕೊಳದತ್ತ ಮುಖ ಮಾಡಿದ್ದಾರೆ. ಸರ್ಕಾರದಿಂದ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ