Breaking News

ಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ – ನಾಲಾಯಕ್.. ಅಯೋಗ್ಯ ಸರ್ಕಾರ ಇದು: ಬಿವೈವಿ ಕಿಡಿ

Spread the love

ಬೆಂಗಳೂರು: ಇದೊಂದು ನಾಲಾಯಕ್ ಸರ್ಕಾರ. ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧವನ್ನ ಬಿಜೆಪಿ ಖಂಡಿಸುತ್ತೆ ಎಂದು ಬಿಜೆಪಿ  ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ  ಕಿಡಿಕಾರಿದ್ದಾರೆ.

ಬೆಂಗಳೂರಲ್ಲಿ ಪ್ರತಿಕ್ರಿಯಿಸಿದ ಅವರು, ಇದು ಪ್ರಜಾಪ್ರಭುತ್ವ ವಿರೋಧಿ ನಡೆ. ಬೆಳಗಾವಿ ಅಧಿವೇಶನದಲ್ಲಿ ದ್ವೇಷ ಭಾಷಣ ಕಾಯ್ದೆ ತಂದ್ರು. ಇದೆಲ್ಲವನ್ನ ಗಮನಿಸಿದ್ರೆ ಕಾಂಗ್ರೆಸ್ ಸರ್ಕಾರದ್ದು ಪ್ರಜಾಪ್ರಭುತ್ವ ಅಣಕಿಸುವ ನಡೆ ಎಂದು ಟೀಕಿಸಿದ್ದಾರೆ.

ಪಾಕಿಸ್ತಾನ ಜಯಘೋಷಗಳನ್ನ ನಿಲ್ಲಿಸಲು ಆಗದ ಅಯೋಗ್ಯ ಸರ್ಕಾರ ಇದು. ವಿಧಾನಸೌಧದಲ್ಲಿ ಪಾಕಿಸ್ತಾನ್ ಜಿಂದಾಬಾದ್ ಎಂದು ಕೂಗಿದವರಿಗೆ ಪುರಾವೆ ಇಲ್ಲ ಎಂದ ಸರ್ಕಾರ ಇದು. ಈಗ ಸಚಿವರ ಕಚೇರಿಯಲ್ಲಿ ಕಳ್ಳತನ ಬೆಳಕಿಗೆ ಬಂದಿದೆ, ಇದನ್ನ ನೆಪವೊಡ್ಡಿ ಮಾಧ್ಯಮಗಳ ಮೇಲೆ ನಿರ್ಬಂಧ ತರುವುದು ಸರಿಯಲ್ಲ, ನಾವು ಒಪ್ಪುವುದಿಲ್ಲ ಎಂದು ಆಕ್ರೋಶ ಹೊರಹಾಕಿದ್ದಾರೆ.


Spread the love

About Laxminews 24x7

Check Also

ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ ಸಿಎಂ ಜೊತೆ ಚರ್ಚೆ: ಚಲುವರಾಯಸ್ವಾಮಿ

Spread the loveಬೆಂಗಳೂರು: ವಿಧಾನಸೌಧದಲ್ಲಿ  ಮಾಧ್ಯಮಗಳಿಗೆ ನಿರ್ಬಂಧ ಹಾಕಿರೋ ವಿಚಾರವನ್ನು ಸಿಎಂ ಗಮನಕ್ಕೆ ತಂದು ಸರಿ ಮಾಡಿಸುತ್ತೇನೆ ಅಂತ ಸಚಿವ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ