Breaking News
Home / Uncategorized / ವಿಜಯನಗರ ವಸಂತ ವೈಭವ ಮೆರವಣಿಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

ವಿಜಯನಗರ ವಸಂತ ವೈಭವ ಮೆರವಣಿಗೆ ಸಚಿವೆ ಶಶಿಕಲಾ ಜೊಲ್ಲೆ ಚಾಲನೆ

Spread the love

 

 

ವಿಜಯನಗರ : ಹಂಪಿ ಉತ್ಸವದ ಮೆರಗನ್ನ ವಸಂತ ವೈಭವ ಮೆರವಣಿಗೆ ಇನ್ನಷ್ಟು ಹೆಚ್ಚಿಸಿದೆ ಮುಜರಾಯಿ, ಹಜ್‌ ಮತ್ತು ವಕ್ಫ್‌ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಶಶಿಕಲಾ ಜೊಲ್ಲೆ ಹೇಳಿದರು.

 

ಇಂದು ಹಂಪಿ ಉತ್ಸವದ ಅಂಗವಾಗಿ ಹೊಸಪೇಟೆಯ ವಡಕರಾಯನ ದೇವಸ್ಥಾನದಿಂದ ಪ್ರಾರಂಭವಾದ ವಸಂತ ವೈಭವ ಮೆರವಣಿಗೆಗೆ ಚಾಲನೆ ನೀಡಿ ಮಾತನಾಡಿದರು. ದೇಶ ಮತ್ತು ರಾಜ್ಯದ ಜನತೆಗೆ ವಿಜಯನಗರ ಸಾಮ್ರಾಜ್ಯದ ಗತ ವೈಭವವನ್ನು ಸಾರುವ ನಿಟ್ಟಿನಲ್ಲಿ ಹಂಪಿ ಉತ್ಸವ ಪ್ರಮುಖ ಪಾತ್ರವಹಿಸುತ್ತದೆ. ಇಂದು ಉತ್ಸವದ ಮುನ್ನಾದಿನ ದೇಶದ ಭಾಗಗಳಿಂದ ಆಗಮಿಸಿರುವ ಕಲಾತಂಡಗಳು ವಸಂತ ವೈಭವ ಮೆರವಣಿಗೆಯಲ್ಲಿ ಭಾಗವಹಿಸುವ ಮೂಲಕ ಇನ್ನಷ್ಟು ಮೆರಗನ್ನು ಹೆಚ್ಚಿಸಿವೆ ಎಂದರು.

 

ರಾಜ್ಯದ ಹಾಗೂ ದೇಶದ ವಿವಿಧ ಭಾಗಗಳಿಂದ ಆಗಮಿಸಲಿರುವ ನೂರಕ್ಕೂ ಹೆಚ್ಚು ಕಲಾತಂಡಗಳು, ಕಂಸಾಳೆ, ಪೂಜಾಕುಣಿತ, ಕರಡಿ ಮಜಲು, ಲಂಬಾಣಿ ನೃತ್ಯ, ಚಿಲಿಪಿಲಿ ಗೊಂಬೆ, ಆಲಾಯಿ ಹೆಜ್ಜೆಮೇಳ, ಸೋಮನ ಕುಣಿತ, ಮಹಿಳಾ ವೀರಗಾಸೆ, ಕೊಂಬು ಕಹಳೆ, ಚಂಡೆ ವಾದನ, ಝಾಂಜ್‌ ಮೇಳ, ಮೋಜಿನ ಗೊಂಬೆ, ಜಗ್ಗಲಿಗಿ, ಖಡ್ಗವರಸೆ, ನವಿಲು ಕುಣಿತ, ಮರಗಾಲು ಬೀಸು, ಕಂಸಾಳೆ, ಸಿಂಧೋಳ ಕುಣಿತ, ಸಮಾಳ ಮತ್ತು ನಂದಿಕೋಲು, ಕುದುರೆ ಕುಣಿತ, ನಾದಸ್ವರ, ಡೊಳ್ಳುಕುಣಿತ, ಕೋಲಾಟ, ಹಗಲು ವೇಷ, ಸಿಂಧೋಳ್‌ ಕುಣಿತ, ತಾಷಾರಂಡೋಲ್‌, ಗೊಂದಲಿಗರಹಾಡು, ಗೊರವರ ಕುಣಿತ, ಕೇರಳ ತಂಡದಿಂದ ಪೂಜಾಕುಣಿತ, ಕಾಳೆವೇಷಂ, ಕಥಕಳಿ, ಪಂಜಾಬಿ ಡೋಲ್‌, ತಮಿಳುನಾಡಿನ ತಂಡದಿಂದ ಕೋಳೀನೃತ್ಯ, ಆಂಧ್ರಪ್ರದೇಶದ ಗೊರವರ ಕುಣಿತ ಹೀಗೆ ಹಲವಾರು ನೃತ್ಯ ಪ್ರಕಾರಗಳ ಮೆರವಣಿಗೆಯನ್ನ ನೋಡಿ ದೇಶದ ಸಂಸ್ಕೃತಿಯನ್ನು ಕಣ್ತುಂಬಿಸಿಕೊಂಡಂತಾಗಿದೆ ಎಂದರು.

 

ಕಾರ್ಯಕ್ರಮದಲ್ಲಿ ಪ್ರವಾಸೋದ್ಯಮ ಸಚಿವರಾದ ಆನಂದ್‌ಸಿಂಗ್‌, ಸಂಸದ ವೈ.ದೇವೇಂದ್ರಪ್ಪ, ಜಿಲ್ಲಾಧಿಕಾರಿ ಹಾಗೂ ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ಟಿ.ವೆಂಕಟೇಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಶ್ರೀಹರಿ ಬಾಬು, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬೋಯರ್ ಹರ್ಷಲ್ ನಾರಾಯಣರಾವ್, ನಗರಸಭೆ ಅಧ್ಯಕ್ಷೆ ಸುಂಕಮ್ಮ, ನಗರಾಭಿವೃದ್ದಿ ಪ್ರಾಧಿಕಾರದ ಅಧ್ಯಕ್ಷ ಅಶೋಕ್ ಜೀರೆ, ಅಪರ ಜಿಲ್ಲಾಧಿಕಾರಿ ಅನುರಾಧ ಕೆ., ಉಪವಿಭಾಗಾಧಿಕಾರಿ ಸಿದ್ದರಾಮೇಶ್ವರ, ತಹಶೀಲ್ದಾರ್ ವಿಶ್ವಜೀತ್ ಮೆಹ್ತಾ ಉಪಸ್ಥಿತರಿದ್ದರು.


Spread the love

About Laxminews 24x7

Check Also

ಬೆಳಗಾವಿ: ಪುತ್ರನ ಪರ ಪ್ರಚಾರಕ್ಕೆ ಆಶಾ ಕಾರ್ಯಕರ್ತೆಯರಿಗೆ ಒತ್ತಡ – ಸಚಿವೆ ಹೆಬ್ಬಾಳ್ಕರ್ ವಿರುದ್ಧ ಕ್ರಿಮಿನಲ್ ಕೇಸ್

Spread the loveಬೆಳಗಾವಿ: ಲೋಕಸಭೆ ಚುನಾವಣೆಯಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ ಹಿನ್ನೆಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ