Breaking News

ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟ – ಮೂವರಿಗೆ ಗಾಯ

Spread the love

ವಿಜಯಪುರ: ಪಾನ್ ಶಾಪ್‌ನಲ್ಲಿ  ನಿಗೂಢ ಸ್ಫೋಟ  ಸಂಭವಿಸಿದ ಪರಿಣಾಮ ಮೂವರು ಗಾಯಗೊಂಡಿರುವ ಘಟನೆ ವಿಜಯಪುರ ಜಿಲ್ಲೆ ಬಬಲೇಶ್ವರ  ತಾಲೂಕಿನ ಮಮದಾಪೂರ ಗ್ರಾಮದಲ್ಲಿ ಘಟನೆ ನಡೆದಿದೆ.

ರವಿಕಿರಣ ಎಂಬುವವರಿಗೆ ಸೇರಿದ ಶೆಡ್ ಮಾದರಿಯ ಪಾನ್ ಶಾಪ್‌ನಲ್ಲಿ ಘಟನೆ ನಡೆದಿದೆ. ಪಾನ್ ಶಾಪ್‌ನಲ್ಲಿ ನಿಗೂಢ ಸ್ಫೋಟದಲ್ಲಿ ಪಾನ್ ಶಾಪ್ ಒಳಗಿದ್ದ ಫ್ರಿಡ್ಜ್‌ಗೆ ಯಾವುದೇ ಹಾನಿಯಾಗಿಲ್ಲ. ಹೊರಗಡೆಯಿಂದ ಸ್ಫೋಟವಾಗಿರೋ ಶಂಕೆ ವ್ಯಕ್ತವಾಗಿದೆ. ಸ್ಫೋಟದಲ್ಲಿ ಅಂಗಡಿ ಮಾಲೀಕ ರವಿಕಿರಣ ಸೇರಿದಂತೆ ಮೂವರಿಗೆ ಗಾಯಗಳಾಗಿವೆ.

ಸದ್ಯ ಗಾಯಾಳುಗಳನ್ನ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ. ಸ್ಥಳಕ್ಕೆ ಬಬಲೇಶ್ವರ ಪೊಲೀಸರು ದೌಡಾಯಿಸಿ ಪರಿಶೀಲನೆ ನಡೆಸಿದ್ದಾರೆ. ಅಲ್ಲದೇ ಅಗ್ನಿಶಾಮಕ ದಳ, ಸೊಕೋ ತಂಡ ಶ್ವಾನದಳದಿಂದ ಪರೀಕ್ಷೆ ನಡೆಸಿದ್ದಾರೆ. ಸದ್ಯ ಯಾವುದೇ ಸ್ಫೋಟಕ ವಸ್ತುಗಳು ಪತ್ತೆಯಾಗಿಲ್ಲ. ಪೊಲೀಸ್ ತನಿಖೆಯ ಬಳಿಕ ಸ್ಫೋಟಕ್ಕೆ ನಿಖರ ಕಾರಣ ತಿಳಿದು ಬರಲಿದೆ.


Spread the love

About Laxminews 24x7

Check Also

ಅರಣ್ಯ ಇಲಾಖೆಯಿಂದ ಶಾಕ್ – ಬಂಡೀಪುರ, ನಾಗರಹೊಳೆಯಲ್ಲಿ ಸಫಾರಿ ರೇಟ್ ಡಬಲ್

Spread the loveಚಾಮರಾಜನಗರ: ಅರಣ್ಯ ಇಲಾಖೆಯು ಸಫಾರಿ ಮಾಡೋರಿಗೆ ಶಾಕ್ ನೀಡಿದ್ದು, ಪ್ರಸಿದ್ಧ ಬಂಡೀಪುರ, ನಾಗರಹೊಳೆಯಲ್ಲಿ  ಸಫಾರಿ ದರವನ್ನು  ಬಹುತೇಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ