Breaking News

ಬಿ.ವೈ.ವಿಜಯೇಂದ್ರ ‘ಮುಂದಿನ ಸಿಎಂ’; ಬಿಜೆಪಿ ಕಾರ್ಯಕರ್ತರಿಂದ ಘೋಷಣೆ

Spread the love

ಕೋಲಾರ: ಬಿಜೆಪಿ ರಾಜ್ಯ ಉಪಾಧ್ಯಕ್ಷ್ಯ ಬಿ.ವೈ.ವಿಜಯೇಂದ್ರ ಅವರು ನ.2 ರಂದು ಕೋಲಾರಕ್ಕೆ ಆಗಮಿಸಿದ ವೇಳೆ ‘ಮುಂದಿನ ಸಿಎಂ’ ಎಂಬ ಘೋಷಣೆಗಳು ಕೇಳಿಬಂದಿವೆ.
ವಿಜಯೇಂದ್ರ ಅವರು ಬುಧವಾರ ಮುಳಬಾಗಿಲು ತಾಲೂಕಿನಲ್ಲಿರುವ ದೇಗುಲ ಕಾರ್ಯಕ್ರಮವೊಂದಕ್ಕೆ ತೆರಳುಲು ಕೋಲಾರ ಮಾರ್ಗವಾಗಿ ಹೊರಟ್ಟಿದ್ದರು.
ಈ ವೇಳೆ ಕೋಲಾರದಲ್ಲಿ ಬಿಜೆಪಿ ಮುಖಂಡ ಓಂ ಶಕ್ತಿ ಚಲಪತಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಹೂವಿನ ಸುರಿಮಳೆ ಸುರಿಸಿ, ಪಠಾಕಿ ಸಿಡಿಸಿ ಅದ್ಧೂರಿಯಾಗಿ ಸ್ವಾಗತ ಮಾಡಿದರು.

ಬಿಜೆಪಿ ಕಾರ್ಯಕರ್ತರು ವಿಜಯೇಂದ್ರ ಅವರಿಗೆ ಸನ್ಮಾನಿಸಿ ಮುಂದಿನ ಸಿಎಂ ಎಂದು ಘೋಷಣೆ ಕೂಗಿದರು. ಇದಕ್ಕೆ ವಿಜಯೇಂದ್ರ ಅವರು, ನಗುತ್ತಲೇ ಒಳ್ಳೆದಾಗಲಿ ಎಂದು ಹೇಳಿ ಅಲ್ಲಿಂದ ಹೊರಟರು.


Spread the love

About Laxminews 24x7

Check Also

ಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ ನೀಡಬೇಕು.:ಹೆಚ್. ಕೆ.ಪಾಟೀಲ್

Spread the loveಮಹದಾಯಿ ಯೋಜನೆಗೆ ಕೇಂದ್ರ ಸರ್ಕಾರದ ಪರಿಸರ ಮತ್ತು ವನ್ಯಜೀವಿ ಮಂಡಳಿ ಮುಂದಿನ ಎರಡು ತಿಂಗಳ ಒಳಗಾಗಿ ಅನುಮತಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ