Breaking News

ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆ ಸೆರೆ – ನಿಟ್ಟುಸಿರು ಬಿಟ್ಟ ಗ್ರಾಮಸ್ಥರು

Spread the love

ಮಡಿಕೇರಿ: ವಿರಾಜಪೇಟೆ ತಾಲೂಕಿನ ಸಿದ್ದಾಪುರ ಗ್ರಾಮದಲ್ಲಿ ಹಲವರನ್ನು ಬಲಿ ಪಡೆದಿದ್ದ ನರಹಂತಕ ಕಾಡಾನೆಯನ್ನು ಅರಣ್ಯ ಇಲಾಖೆ ಸಿಬ್ಬಂದಿ ಸೆರೆಹಿಡಿದಿದ್ದಾರೆ.

35 ವರ್ಷ ಪ್ರಾಯದ ಕಾಡಾನೆ ಕಾಫಿ ತೋಟಗಳಲ್ಲಿ ಬೀಡು ಬಿಟ್ಟು ಉಪಟಳ ನೀಡುತ್ತಿತ್ತು. ಸಿದ್ದಾಪುರ ಸಮೀಪ ಕಾಫಿ ಬೆಳೆಗಾರರೊಬ್ಬರನ್ನು ಇತ್ತೀಚೆಗೆ ಬಲಿ ತೆಗೆದುಕೊಂಡಿತ್ತು. ಗ್ರಾಮಸ್ಥರು ಕಾಡಾನೆ ಸೆರೆಹಿಡಿಯುವಂತೆ ಅರಣ್ಯ ಇಲಾಖೆಗೆ ಮನವಿ ಮಾಡಿದ್ದರು.

ಬೆಳಗ್ಗೆಯಿಂದಲೇ 6 ಸಾಕಾನೆಗಳೊಂದಿಗೆ ಅರಣ್ಯ ಇಲಾಖೆ ಸಿಬ್ಬಂದಿ ಕಾರ್ಯಾಚರಣೆ ಆರಂಭಿಸಿದ್ದರು. ಸಿದ್ದಾಪುರ, ಪಾಲಿಬೆಟ್ಟ, ಅಮ್ಮತ್ತಿ ಸುತ್ತಮುತ್ತಲ ಕಾಫಿ ತೋಟಗಳಲ್ಲಿ ಹುಡುಕಾಟ ನಡೆಸಿದ್ದರು. ಚೆನ್ನೈನಕೋಟೆ ಬಾಡಗ ಬಾಣಂಗಾಲ ಸಮೀಪದ ಕಾಫಿ ತೋಟದಲ್ಲಿ ಒಂಟಿ ಸಲಗ ಪತ್ತೆಯಾಗಿತ್ತು.

ಅರವಳಿಕೆ ನೀಡಿ ಸೆರೆ ಹಿಡಿಯುವಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಯಶಸ್ವಿಯಾಗಿದ್ದಾರೆ. ಕಾಡಾನೆ ಸೆರೆಯಿಂದ ಗ್ರಾಮಸ್ಥರು ನೆಟ್ಟುಸಿರು ಬಿಟ್ಟಿದ್ದಾರೆ.


Spread the love

About Laxminews 24x7

Check Also

ಕೊಡಗಿನಲ್ಲಿ ಗಾಂಜಾ ಮಾರಾಟ ದಂಧೆ ಹೊಸದೇನು ಅಲ್ಲ.ಪೊಲೀಸ್ ಇಲಾಖೆಯಲ್ಲಿ ಕೆಲ ಅಧಿಕಾರಿಗಳು ಕಳ್ಳರಿದ್ದಾರೆ……………….?

Spread the loveಮಡಿಕೇರಿ: ಕೊಡಗಿನಲ್ಲಿ ಗಾಂಜಾ ಮಾರಾಟ ದಂಧೆ ಹೊಸದೇನು ಅಲ್ಲ. ಹಿಂದಿನಿಂದಲೂ ಗಾಂಜಾ ಮಾರಾಟ ತುಂಬಾ ಇದೆ. ಆದರೆ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ