Breaking News

ಕಿತ್ತೂರಿನಲ್ಲಿ ವಿನಯೋತ್ಸವ: ಶಾಸಕ ಅಮೃತ್ ದೇಸಾಯಿಗೆ ಟಕ್ಕರ್ ಕೊಡಲು ವಿನಯ್ ಕುಲಕರ್ಣಿ ಶಕ್ತಿ ಪ್ರದರ್ಶನ

Spread the love

ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜನ್ಮದಿನದ ಅಂಗವಾಗಿ ವಿನಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಧಾರವಾಡ: ಮುಂಬರುವ ವಿಧಾನಸಭೆ ಚುನಾವಣೆಗೆ ಧಾರವಾಡ ಗ್ರಾಮೀಣ ಕ್ಷೇತ್ರದಲ್ಲಿ ಈಗಿನಿಂದಲೇ ಪೈಪೋಟಿ ಶುರುವಾಗಿದೆ.

ಶಾಸಕ ಅಮೃತ್ ದೇಸಾಯಿಗೆ ಮಾಜಿ ಸಚಿವ ವಿನಯ್ ಕುಲಕರ್ಣಿ ಟಕ್ಕರ್ ಕೊಡಲು ಮುಂದಾಗಿದ್ದಾರೆ.

 

ಹೌದು, ಶಾಸಕ ‌ಅಮೃತ ದೇಸಾಯಿ ವಿರುದ್ಧ ಶಕ್ತಿ ಪ್ರದರ್ಶನಕ್ಕೆ ಕುಲಕರ್ಣಿ ಸಜ್ಜಾಗಿದ್ದಾರೆ. ಬೆಳಗಾವಿ ಜಿಲ್ಲೆಯ ಕಿತ್ತೂರಿನಲ್ಲಿ ಇದೇ 7 ರಂದು ಮಾಜಿ ಸಚಿವ ವಿನಯ್ ಕುಲಕರ್ಣಿ ಜನ್ಮ ದಿನದ ಅಂಗವಾಗಿ ವಿನಯೋತ್ಸವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮಕ್ಕೆ ಸುಮಾರು 2 ಲಕ್ಷ ಜನರನ್ನು ಸೇರಿಸಲು ವಿನಯ್ ಕುಲಕರ್ಣಿ ಅಭಿಮಾನಿಗಳು ಹಾಗೂ ಬೆಂಬಲಿಗರು ಸಿದ್ಧತೆ ಮಾಡಿಕೊಂಡಿದ್ದಾರೆ.

 

ಯೋಗೇಶ್​ ಗೌಡ‌ ಕೊಲೆ ಪ್ರಕರಣದ ಬಳಿಕ ಜಿಲ್ಲೆಯಿಂದ ವಿನಯ್ ಕುಲಕರ್ಣಿ ಹೊರಗುಳಿದಿದ್ದಾರೆ. ಹೀಗಾಗಿ, ಧಾರವಾಡ ಗ್ರಾಮೀಣ ಕ್ಷೇತ್ರಕ್ಕೆ ಹೊಂದಿಕೊಂಡಿರುವ ಕಿತ್ತೂರಿನಿಂದಲೇ ಶಕ್ತಿ ಪ್ರದರ್ಶನ ಮಾಡಲು ಮುಂದಾಗಿದ್ದಾರೆ. ಈ ಹಿಂದೆ ಧಾರವಾಡ ಗ್ರಾಮೀಣ ಕ್ಷೇತ್ರದಿಂದಲೇ ಸ್ಪರ್ಧೆ ಮಾಡುತ್ತೇನೆ, ಧಾರವಾಡಕ್ಕೆ ಬಂದೇ ಬರುತ್ತೇನೆ ಎಂದು ಕುಲಕರ್ಣಿ ವಿಡಿಯೋವೊಂದನ್ನು ಹರಿಬಿಟ್ಟಿದ್ದರು. ಹೀಗಾಗಿ, ಕಳೆದ 15 ದಿನಗಳ ಹಿಂದೆ ಧಾರವಾಡದಲ್ಲಿ ನಡೆದ ಸಂಕಲ್ಪ ಸಭೆಯಲ್ಲಿ ಮಾಜಿ ‌ಸಚಿವ ವಿನಯ್ ಕುಲಕರ್ಣಿಗೆ ಶಾಸಕ ಅಮೃತ್ ದೇಸಾಯಿ ಸವಾಲ್ ಹಾಕಿದ್ದರು.

ಹಾಲು ಕುಡಿದವರೇ ಬದುಕುವುದು ಕಷ್ಟ ವಿಷ ಕುಡಿದವರು ಬದುಕುತ್ತಾರಾ?, ಎಲ್ಲೋ ಕುಳಿತುಕೊಂಡು ಧಾರವಾಡಕ್ಕೆ ಬರುತ್ತೇನೆ ಅಂತಾ ಹೇಳುತ್ತಿದ್ದಾರೆ. ಎಲ್ಲೋ ಕುಳಿತು ವಿಡಿಯೋ ಮಾಡಿ ಹೇಳುವುದು ಏಕೆ?, ನಿನಗಾಗಿಯೇ ಕಾಯುತ್ತಿದ್ದೇನೆ ಬಾ ಎನ್ನುವ ಮೂಲಕ ಕ್ಷೇತ್ರದಿಂದ ಹೊರಗಿರುವ ವಿನಯ್​ ಕುಲಕರ್ಣಿ‌ಗೆ ಸವಾಲ್ ಹಾಕಿದ್ದರು. ಇದೇ ಕಾರಣಕ್ಕೆ ಅಮೃತ್ ದೇಸಾಯಿ ಅವರಿಗೆ ವಿನಯ್ ಕುಲಕರ್ಣಿ‌ ಶಕ್ತಿ ತೋರಿಸಲು ವಿನಯ್ ಬೆಂಬಲಿಗರು ಹೊರಟಿದ್ದಾರೆ.

 

ಇನ್ನು ವಿನಯೋತ್ಸವ ಕಾರ್ಯಕ್ರಮದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಘಟಾನುಘಟಿಗಳು ಭಾಗಿಯಾಗುವ ಸಾಧ್ಯತೆ ಇದೆ.


Spread the love

About Laxminews 24x7

Check Also

ಪರಪ್ಪನ ಅಗ್ರಹಾರ ಜೈಲೋ? ರೆಸಾರ್ಟೋ?

Spread the loveಬೆಂಗಳೂರು, ಅಕ್ಟೋಬರ್​ 09: ಪರಪ್ಪನ ಅಗ್ರಹಾರ (Parappana Agrahara) ಜೈಲಿನಲ್ಲಿ ರೌಡಿ ಶೀಟರ್​ ಗುಬ್ಬಚ್ಚಿ ಸೀನಾ ಹುಟ್ಟುಹಬ್ಬ ಆಚರಣೆಯ ವಿಚಾರ ವ್ಯಾಪಕ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ